ಮಡಿಕೇರಿ, ನ. ೧: ಕನ್ನಡ ನಾಡು - ನುಡಿಯ ಹಿತರಕ್ಷಣೆಗೆ ಸರ್ಕಾರ ಕಟಿಬದ್ಧವಾಗಿದೆ. ಅಂತರ್ಜಾಲದಲ್ಲಿ ಕನ್ನಡ ಭಾಷೆಯ ಬಳಕೆ ಯಥೇಚ್ಚವಾಗಿದ್ದು, ವಾಣಿಜ್ಯ ಕ್ಷೇತ್ರದಲ್ಲಿಯೂ ಮುಂಚೂಣಿ ಭಾಷೆಯಾಗಿ ಕನ್ನಡ ಬೆಳೆಯ ತೊಡಗಿರುವುದು ಸಂತಸದ ಸಂಗತಿಯಾಗಿದೆ. ಕರ್ನಾಟಕದ ಇತಿಹಾಸ ಮತ್ತು ಪರಂಪರೆ ಅತ್ಯಂತ ಶ್ರೀಮಂತವಾಗಿದ್ದು, ಅಖಂಡ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಯುವ ಪೀಳಿಗೆ ಪಾಲುದಾರರಾಗಬೇಕೆಂದು ಕೊಡಗು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕರೆ ನೀಡಿದರು.

ಕೊಡಗು ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಏರ್ಪಡಿಸಲಾಗಿದ್ದ ೬೬ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಕಳೆದ ಎರಡೂವರೆ ವರ್ಷಗಳಿಂದ ಕೋವಿಡ್ ಸಂಕಷ್ಟ ಹಾಗೂ ಪ್ರಕೃತಿ ವಿಕೋಪದ ನಡುವೆಯೂ ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡಲು ದೃಢ ಸಂಕಲ್ಪ ಮಾಡಿದೆ. ದೇಶಕ್ಕೆ ಸ್ವಾತಂತ್ರö್ಯ ದೊರಕಿ ೭೫ ವರ್ಷಗಳಾಗುತ್ತಿವೆ. ಸ್ವತಂತ್ರರಾಗಿ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂಭ್ರಮದ ನೆನಪಿನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿದೆ.

ರಾಜ್ಯದ ಆಯ್ದ ೭೫೦ ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗಿದೆ. ಕೊಡಗು ಜಿಲ್ಲೆಗೆ ಸಂಬAಧಪಟ್ಟAತೆ ೧೨ ಗ್ರಾ.ಪಂ.ಗಳು ಆಯ್ಕೆಯಾಗಿದ್ದು, ಪೆರಾಜೆ, ಕುಂಜಿಲ - ಕಕ್ಕಬ್ಬೆ, ಮರಗೋಡು, ಕೆದಮುಳ್ಳೂರು, ಕಾರ್ಮಾಡು, ನಾಲ್ಕೇರಿ, ತಿತಿಮತಿ, ಕೂಡುಮಂಗಳೂರು, ಶಿರಂಗಾಲ, ಐಗೂರು, ಹರದೂರು, ದುಂಡಳ್ಳಿ ಗ್ರಾ.ಪಂ.ಗಳು ಆಯ್ಕೆಯಾಗಿವೆ. ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರು, ಘನ ತ್ಯಾಜ್ಯದ ಶೇ. ೧೦೦ ರಷ್ಟು ವಿಂಗಡಣೆ ಮತ್ತು ವಿಲೇವಾರಿ, ತ್ಯಾಜ್ಯ ನೀರಿನ ವೈಜ್ಞಾನಿಕ ನಿರ್ವಹಣೆ, ಸೌರ ವಿದ್ಯುತ್ ಘಟಕಗಳ ಅಳವಡಿಕೆ, ಡಿಜಿಟಲ್ ಗ್ರಂಥಾಲಯಗಳ

(ಮೊದಲ ಪುಟದಿಂದ) ಶಾಲೆಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತದೆ ಎಂದರು. ಹಾಗೆಯೇ ಜಿಲ್ಲೆಯಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮ ಪಂಚಾಯತ್‌ಗಳಲ್ಲಿ ವಸತಿ ರಹಿತ ಮತ್ತು ಆಶ್ರಯ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸಲಾಗುತ್ತಿದೆ.

ರೈತ ಉತ್ಪಾದಕರ ಸಂಸ್ಥೆ : ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟವನ್ನು ಉತ್ತೇಜಿಸಲು ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಸಂಸ್ಥೆಗಳಿಗೆ ತಲಾ ರೂ. ೩೦ ಲಕ್ಷದಂತೆ ಮೂರು ವರ್ಷದ ಅವಧಿಯಲ್ಲಿ ಅನುದಾನ ನೀಡಲಾಗುತ್ತದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಮೃತ ನಿರ್ಮಲ ನಗರ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮವಹಿಸಲಾಗುತ್ತದೆ ಎಂದು ಹೇಳಿದರು.

ಶಾಲೆಗಳಿಗೆ ತಲಾ ೧೦ ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಮತ್ತಿತರ ಸೌಲಭ್ಯ ಕಲ್ಪಿಸಲು ಅಮೃತ ಶಾಲಾ ಸೌಲಭ್ಯ ಯೋಜನೆ ಜಾರಿಗೆ ಬಂದಿದ್ದು, ಜಿಲ್ಲೆಗೆ ಸಂಬAಧಿಸಿದAತೆ ಹೊದವಾಡ, ಸಂಪಾಜೆ, ಕಡಂಗ, ಮಾದಾಪುರ, ದೊಡ್ಡಮಳ್ತೆ, ಕೊಡ್ಲಿಪೇಟೆ, ವಾಲ್ನೂರು ತ್ಯಾಗತ್ತೂರು, ಹೆಬ್ಬಾಲೆ, ಸುಂಟಿಕೊಪ್ಪ, ಹೆಗ್ಗಳ, ಅಮ್ಮತ್ತಿ, ಪಾಲಿಬೆಟ್ಟ, ಟಿ.ಶೆಟ್ಟಿಗೇರಿ, ತಿತಿಮತಿ, ಗೋಣಿಕೊಪ್ಪ ಮತ್ತು ಕುಟ್ಟ ಸರ್ಕಾರಿ ಶಾಲೆಗಳು ಆಯ್ಕೆಯಾಗಿವೆ. ಅಂಗನವಾಡಿ ಕೇಂದ್ರಗಳ ಮೂಲ ಸೌಕರ್ಯ ಅಭಿವೃದ್ಧಿ ಪಡಿಸಲು ಅಮೃತ ಅಂಗನವಾಡಿ ಕೇಂದ್ರ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ತಲಾ ರೂ. ೧ ಲಕ್ಷ ಅನುದಾನ ಒದಗಿಸಲಾಗುತ್ತದೆ. ಕೊಡಗು ಜಿಲ್ಲೆಯಲ್ಲಿ ಒಟ್ಟು ೨೫ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ ಎಂದರು.

ಕಿರು ಉದ್ದಿಮೆಗಳ ಆರಂಭ : ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳನ್ನಾಗಿ ರೂಪಿಸಲು ಅಮೃತ ಸ್ವಸಹಾಯ ಕಿರು ಉದ್ಯಮ ಯೋಜನೆಯಡಿ ತಲಾ ರೂ. ೧ ಲಕ್ಷ ಮೂಲಧನ ನೀಡಲಾಗುತ್ತದೆ. ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ೬೦ ಸ್ತಿçÃಶಕ್ತಿ - ಸ್ವಸಹಾಯ ಗುಂಪುಗಳನ್ನು ಕಿರು ಉದ್ದಿಮೆಗಳನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಅಮೃತ ಆರೋಗ್ಯ ಮೂಲ ಸೌಕರ್ಯ ಉನ್ನತೀಕರಣ ಯೋಜನೆ ಅಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಪಡಿಸಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ರಾಜ್ಯದಲ್ಲಿ ೭೫ ಸಾವಿರ ಯುವಕ, ಯುವತಿಯರಿಗೆ ಅಮೃತ ಕೌಶಲ್ಯ ಯೋಜನೆಯಡಿ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕ್ರಮವಹಿಸಲಾಗುತ್ತದೆ.

ಒಲಂಪಿಕ್ ಕ್ರೀಡಾ ಕೂಟದಲ್ಲಿ ಚಿನ್ನ ಗೆಲ್ಲುವಂತಹ ಸಾಮರ್ಥ್ಯವುಳ್ಳ ಕ್ರೀಡಾಪಟುಗಳನ್ನು ರೂಪಿಸುವುದಕ್ಕಾಗಿ ಅಮೃತ ಕ್ರೀಡಾ ದತ್ತು ಯೋಜನೆ ಅಡಿಯಲ್ಲಿ ಕ್ರೀಡಾಪಟುಗಳಿಗೆ ತರಬೇತಿ, ಪ್ರೋತ್ಸಾಹ ನೀಡಲು ಸರ್ಕಾರ ಮುಂದಾಗಿದೆ ಎಂದು ಶ್ರೀನಿವಾಸ ಪೂಜಾರಿ ಮಾಹಿತಿಯಿತ್ತರು. ಪಶುಪಾಲನಾ ಇಲಾಖೆ ಮೂಲಕ ಅಮೃತ ಜೀವನ ಯೋಜನೆಯಡಿ ಮಿಶ್ರತಳಿ ಹಸು ಸಾಕಾಣಿಕೆಗಾಗಿ ಜಿಲ್ಲೆಗೆ ೩೦ ಗುರಿ ನಿಗಧಿಪಡಿಸಲಾಗಿದೆ. ರೂ. ೩.೭೫ ಲಕ್ಷ ಸಹಾಯಧನವಿದೆ. ಅಮೃತಧಾರೆ ಮತ್ತು ಅಮೃತ ಸಿರಿ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೋವಿಡ್ ತುರ್ತು ಸಂದರ್ಭ ವಿಶೇಷವಾಗಿ ಕಾರ್ಯನಿರ್ವಹಿಸಿದ ಕೊಡಗು ವೈದ್ಯಕೀಯ ಕಾಲೇಜಿನ ಡಾ. ಪ್ರದೀಪ್ ಹೊಸಗೌಡರ್, ಗೋಣಿಕೊಪ್ಪ ಗ್ರಾ.ಪಂ. ಪಿಡಿಓ ಕೆ.ಎಂ. ತಿಮ್ಮಯ್ಯ, ಜಿಲ್ಲಾ ಸಶಸ್ತçದಳದ ಮುಖ್ಯಪೇದೆ ಎ.ಹೆಚ್. ಅಶೋಕ್, ಹುಲುಗುಂದದ ಗ್ರಾಮ ಲೆಕ್ಕಿಗ ಹೋಮಪ್ಪ ಬಣಕ್ಕರ್, ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶುಶ್ರೂಷಕಿ ಬಿ.ಸಿ. ಡಿನ್ಸಿ, ನೆಲ್ಲಿಹುದಿಕೇರಿಯ ಅಂಗನವಾಡಿ ಕಾರ್ಯಕರ್ತೆ ಎಸ್.ಆರ್. ಮುತ್ತಮ್ಮ, ಕೂಡಿಗೆಯ ಆಶಾ ಕಾರ್ಯಕರ್ತೆ ಗೀತಾ, ನಗರಸಭೆ ಪೌರಕಾರ್ಮಿಕ ಹೆಚ್.ಎಂ. ಶಿವಕುಮಾರ್ ಇವರುಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಪಥ ಸಂಚಲನದಲ್ಲಿ ಜಿಲ್ಲಾ ಸಶಸ್ತçö ಪಡೆ, ನಾಗರಿಕ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕದಳ, ಎಫ್‌ಎಂಸಿ ಕಾಲೇಜು, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ, ಸಂತಜೋಸೆಫರ ಶಾಲೆಯ ಎನ್‌ಸಿಸಿ ತಂಡಗಳು ಭಾಗವಹಿಸಿದ್ದವು. ಸಚಿವರು ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ಸಶಸ್ತç ಪಡೆಯ ನಿರೀಕ್ಷಕ ಚನ್ನನಾಯಕ ಪಥಸಂಚಲನದ ನೇತೃತ್ವ ವಹಿಸಿದ್ದರು. ರಾಜ್ಯೋತ್ಸವ ಪ್ರಯುಕ್ತ ಮಾತಾಡ್ ಮಾತಾಡ್ ಕನ್ನಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿ.ಜೆ. ಮೌನ, ದ್ವಿತೀಯ ಸ್ಥಾನ ಪಡೆದ ಕಿಗ್ಗಾಲು ಗಿರೀಶ್, ಆರ್.ಕೆ. ಬಾಲಚಂದ್ರ, ತೃತೀಯ ಸ್ಥಾನ ಪಡೆದ ಪ್ರತಿಮಾ ಹರೀಶ್ ರೈ, ಗೀತಾ ನಾಯ್ಡು ಬಹುಮಾನ ಸ್ವೀಕರಿಸಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ, ಮೂಡಾ ಅಧ್ಯಕ್ಷ ರಮೇಶ್ ಹೊಳ್ಳ, ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಬಿ.ಸಿ. ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಜಿ.ಪಂ. ಸಿಇಓ ಭಂವರ್ ಸಿಂಗ್ ಮೀನಾ, ಜಿ.ಪಂ. ಉಪಕಾರ್ಯದರ್ಶಿ ಲಕ್ಷಿö್ಮ, ನಗರಸಭಾ ಆಯುಕ್ತ ರಾಮದಾಸ್, ತಹಶೀಲ್ದಾರ್ ಮಹೇಶ್ ಮತ್ತಿತರರು ಹಾಜರಿದ್ದರು. ೧೦೦ ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಿದ ಸಂಭ್ರಮದ ಹಿನ್ನೆಲೆ ೧೦೦ ಬಲೂನುಗಳನ್ನು ಗಾಳಿಯಲ್ಲಿ ಹಾರಿಬಿಡಲಾಯಿತು.