ಸೋಮವಾರಪೇಟೆ, ನ. ೧: ಕರ್ನಾಟಕದಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸಿದರೆ ಭಾಷೆಯ ಬೆಳವಣಿಗೆ ಸಾಧ್ಯ. ಕನ್ನಡ ಭಾಷೆಯೇ ನಮ್ಮ ಉಸಿರಾಗಬೇಕು. ಕನ್ನಡ ನಾಡಿನಲ್ಲಿ ಬದುಕುತ್ತಿರುವವರು ಕನ್ನಡ ಕಲಿಯಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.
ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಎಲ್ಲರ ಮನೆಯ ಭಾಷೆಯಾಗಬೇಕು. ಬದುಕಿಗೆ ಇಂಗ್ಲೀಷ್ ಸೇರಿದಂತೆ ಇತರ ಭಾಷೆಗಳು ಅವಶ್ಯವಾದರೂ ಮಾತೃಭಾಷೆಯ ಬಗ್ಗೆ ನಿರ್ಲಕ್ಷö್ಯ ಸಲ್ಲದು. ಕನ್ನಡಿಗರು ಅನ್ಯಭಾಷಿಕ ರೊಂದಿಗೆ ಅವರ ಭಾಷೆಯಲ್ಲೇ ಮಾತನಾಡುತ್ತಾರೆ. ಆದರೆ ತಮಿಳುನಾಡಿನಂತಹ ರಾಜ್ಯಗಳಲ್ಲಿ ಅಲ್ಲಿನ ಜನರು ಅನ್ಯಭಾಷಿಕರೊಂದಿಗೆ ತಮಿಳು ಭಾಷೆಯಲ್ಲೇ ಮಾತನಾಡುತ್ತಾರೆ. ಇದರಿಂದಾಗಿ ಆ ಭಾಷೆ ಬೆಳೆಯುತ್ತಿದೆ ಎಂದರು.
ತಾಲೂಕು ತಹಶೀಲ್ದಾರ್ ಗೋವಿಂದರಾಜು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಂದೇಶ ನೀಡಿದ ಅವರು, ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಕನ್ನಡಿಗರಾದ ನಾವೆಲ್ಲ ಕಟ್ಟಿಬದ್ಧರಾಗಬೇಕು. ಕನ್ನಡ ಬೆಳೆದಿದೆ, ಇನ್ನು ಅದನ್ನು ಬೆಳಸಬೇಕು. ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡಬೇಕು ಎಂದು ಅಭಿಪ್ರಾಯಿಸಿದರು.
ಮುಖ್ಯ ಅತಿಥಿಯಾಗಿದ್ದ ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು ಮಾತನಾಡಿ, ಗಡಿ, ನದಿ, ಭಾಷೆಗೆ ಧಕ್ಕೆ ಬಂದಾಗ ಯುವ ಸಮುದಾಯ ಹೋರಾಟಕ್ಕೆ ಧುಮುಕಬೇಕು.
ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಆಯೋಜಿಸಲ್ಪಟ್ಟಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖಾಧಿಕಾರಿಗಳು, ಸಿಬ್ಬಂದಿಗಳು, ಆಹ್ವಾನಿತ ಕನ್ನಡಾಭಿಮಾನಿಗಳು, ಮಾಧ್ಯಮ ಮಂದಿ, ಕನ್ನಡಪರ ಸಂಘಸAಸ್ಥೆಗಳ ಪದಾಧಿಕಾರಿಗಳಿಗೆ ಕುಳಿತುಕೊಳ್ಳಲು ಸರಿಯಾದ ಆಸನದ ವ್ಯವಸ್ಥೆ ಮಾಡಿರಲಿಲ್ಲ. ಶಾಲಾ ಕಾಲೇಜು ವಿದ್ಯಾರ್ಥಿ ಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸಿದರೂ ಸಹ ಕಾರ್ಯಕ್ರಮಕ್ಕೆ ಆಗಮಿಸಿದ (ಮೊದಲ ಪುಟದಿಂದ) ಸಾಧು-ಸಂತರು, ದಾಸರು, ಶಿವಶರಣರು, ಕವಿಗಳು, ಸಾಹಿತಿಗಳಿಂದ ಕನ್ನಡ ಸಾಹಿತ್ಯ ಇಂದಿಗೂ ಶ್ರೀಮಂತವಾಗಿದೆ. ಮುಂದಿನ ಪೀಳಿಗೆ ಕನ್ನಡವನ್ನು ಉಳಿಸಿ ಬೆಳೆಸಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯಪ್ರಶಸ್ತಿ ವಿಜೇತರಾದ ದೈಹಿಕ ಶಿಕ್ಷಣ ಅಧೀಕ್ಷಕ ಡಾ.ಸದಾಶಿವ ಪಲ್ಲೇದ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ರಾಷ್ಟಿçÃಯ ಹಬ್ಬಗಳ ಸಮಿತಿ ಉಪಾಧ್ಯಕ್ಷರಾದ ಎಂ.ಬಿ.ಅಭಿಮನ್ಯು ಕುಮಾರ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಉಪಾಧ್ಯಕ್ಷೆ ಮಂಜುಳಾ ಸುಬ್ರಮಣಿ, ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್, ಪ.ಪಂ. ಸದಸ್ಯರಾದ ಶೀಲಾ ಡಿಸೋಜ, ಬಿ.ಆರ್.ಮಹೇಶ್, ಶುಭಕರ್, ಮೋಹಿನಿ, ಮೃತ್ಯುಂಜಯ, ಎಸ್.ಆರ್.ಸೋಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಪಾಂಡು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಕಾಲೇಜು ಪ್ರಾಂಶುಪಾಲ ಬೆಳ್ಯಪ್ಪ, ಪ್ರಮುಖರಾದ ಜೆ.ಸಿ.ಶೇಖರ್ ಉಪಸ್ಥಿತರಿದ್ದರು.
ಪೊಲೀಸರಿಂದ ಧ್ವಜವಂದನೆ ನಡೆಯಿತು. ಪಟ್ಟಣದ ಗೀತಗಾಯನ ತಂಡ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿದರು. ಎಸ್‌ಜೆಎಂ ಶಾಲೆಯ ಮುಖ್ಯ ಶಿಕ್ಷಕಿ ಎಸ್.ಕೆ.ರಾಣಿ ಕಾರ್ಯಕ್ರಮ ನಿರ್ವಹಿಸಿದರು.