ಉಪಚುನಾವಣೆ : ತಲಾ ಒಂದೊAದು ಕ್ಷೇತ್ರದಲ್ಲಿ ಬಿಜೆಪಿ - ಕಾಂಗ್ರೆಸ್ ಜಯಭೇರಿ
ಜೆಡಿಎಸ್ಗೆ ಭಾರೀ ಹಿನ್ನಡೆ
ಬೆಂಗಳೂರು, ನ. ೨: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಕಡಿಮೆ ಮತಗಳಿಸಿರುವ ಜೆಡಿಎಸ್ ಭಾರೀ ಹಿನ್ನೆಡೆ ಅನುಭವಿಸಿದೆ.
ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ೯೩೮೬೫ ಮತಗಳನ್ನು ಪಡೆಯುವ ಮೂಲಕ ಸುಮಾರು ೩೧ ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗುಳಿ ೬೨೬೮೦ ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕೇವಲ ೪೩೫೩ ಮತಗಳಿಸಿದ್ದಾರೆ.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ೮೭೪೯೦ ಮತಗಳಿಸಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ವಿರುದ್ಧ ಸುಮಾರು ೭೩೭೩ ಮತಗಳ ಅಂತರದಿAದ ಜಯಗಳಿಸಿದ್ದು, ಮುಖ್ಯಮಂತ್ರಿಯಾದ ಬಳಿಕ ಸಿಎಂ ಬೊಮ್ಮಾಯಿ ಅವರಿಗೆ ಪ್ರಥಮ ಪರಾಭವವಾಗಿ ಪರಿಣಮಿಸಿದೆ. ಬಿಜೆಪಿ ಶಿವರಾಜ್ ಸಜ್ಜನರ ೮೦೧೧೭ ಮತಗಳಿಸಿದ್ದಾರೆ. ಜೆಡಿಎಸ್ನ ನಿಯಾಜ್ ಶೇಖ್ ೯೨೭ ಮತ ಪಡೆದಿದ್ದಾರೆ. ಹಾನಗಲ್ ಶಾಸಕ ಸಿ.ಎಂ. ಉದಾಸಿ ಹಾಗೂ ಸಿಂದಗಿ ಶಾಸಕ ಎಂ.ಸಿ. ಮಲನಗೂಳಿ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.