ಮಡಿಕೇರಿ, ನ. ೨: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ೯ನೇ ತರಗತಿಯಲ್ಲಿ ಖಾಲಿಯಿರುವ ಸೀಟುಗಳಿಗಾಗಿ ಪ್ರವೇಶ ಪಡೆಯಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸ ಲಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಕೊಡಗು ಜಿಲ್ಲೆಯಲ್ಲಿ ಸರಕಾರಿ ಅರೆ ಸರಕಾರಿ ಯಾವುದೇ ಮಾಧ್ಯಮಿಕ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರು ತ್ತಾರೆ. ಅರ್ಜಿ ಸಲ್ಲಿಸಲು ತಾ. ೧೫ ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಈ ವೆಬ್ ಅಡ್ರೆಸ್ನ್ನು ಗಮನಿಸಬಹುದು. ತಿತಿತಿ. ಓಚಿvoಜಚಿಥಿಚಿ.gov.iಟಿ. ಅಥವಾ iಟಿvsಚಿಜmissioಟಿಛಿಟಚಿss ಟಿiಟಿe.iಟಿ