ಮಡಿಕೇರಿ, ನ. ೨: ಮೂರ್ನಾಡು ಲಯನ್ಸ್ ಕ್ಲಬ್ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರ ವತಿಯಿಂದ ಇತ್ತೀಚೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರದಲ್ಲಿ ೩೦ ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ಸಹಕರಿಸಿದರು. ಕೊಡಗು ವೈದ್ಯಕೀಯ ಕಾಲೇಜಿನ ಡಾ. ಕರುಂಬಯ್ಯ ಅವರು ಶಿಬಿರವನ್ನು ಉದ್ಘಾಟಿಸಿದರು. ಮೂರ್ನಾಡು ಲಯನ್ಸ್ ಅಧ್ಯಕ್ಷ ಬಡುವಂಡ ಅರುಣ್ ಅಪ್ಪಚ್ಚು ಸ್ವಾಗತಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ, ಮೂರ್ನಾಡು ಲಯನ್ಸ್ ಕ್ಲಬ್ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಸಂಘದ ಸದಸ್ಯರು ಹಾಗೂ ಆರೋಗ್ಯ ಕೇಂದ್ರದ ಸದಸ್ಯರು ಹಾಜರಿದ್ದರು.