ಮಡಿಕೇರಿ, ನ. ೩: ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ವತಿಯಿಂದ ಪ್ರವಾದಿ ಮುಹಮ್ಮದ್ ಅತ್ಯುತ್ತಮ ಮಾದರಿ ರಾಜ್ಯವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ವಿಚಾರ ವಿನಿಮಯ ಕಾರ್ಯಕ್ರಮ ಏರ್ಪಡಿಸಲಾಗಿದೆ.
ತಾ.೫ರಂದು ಸಂಜೆ ೬.೩೦ಗಂಟೆಗೆ ಕಾಲೇಜು ರಸ್ತೆಯ ಸಿಪಿಸಿ ಬಡಾವಣೆಯಲ್ಲಿರುವ ಕಾರುಣ್ಯ ಸದನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಹಿರಿಯ ಪತ್ರಕರ್ತ ಎಚ್.ಟಿ.ಅನಿಲ್, ನಗರ ಸಭಾ ಸದಸ್ಯ ಬಿ.ವೈ.ರಾಜೇಶ್, ನಿ.ಸುಬೇದಾರ್ ಮೇಜರ್ ಡೇವಿಡ್ ವೇಗಸ್, ಜಾಮೀಯಾ ಮಸೀದಿ ಅಧ್ಯಕ್ಷ ಮುಹಮ್ಮದ್ ಇಮ್ರಾನ್, ಶಕ್ತಿ ದಿನಪತ್ರಿಕೆ ಉಪ ಸಂಪಾದಕ ಎಂ.ಇ.ಮುಹಮ್ಮದ್, ಜ.ಇ.ಹಿಂದ್ ಜಿಲ್ಲಾ ಸಂಚಾಲಕ ಪಿ.ಕೆ.ಅಬ್ದುಲ್ ರೆಹಮಾನ್ ಉಪಸ್ಥಿತರಿರುವರು. ಜ.ಇ.ಹಿಂದ್‌ನ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಅಧ್ಯಕ್ಷತೆ ವಹಿಸುವರು.