ಗೋಣಿಕೊಪ್ಪಲು, ನ. ೩: ವೀರಾಜಪೇಟೆ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಹಾಗೂ ಆಯಾಕಟ್ಟಿನ ಪ್ರದೇಶಗಳಲಿ ್ಲಗೋಹತ್ಯೆ ಹಾಗೂ ಗೋ ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆ ನಿಷ್ಕಿçಯವಾಗಿದ್ದು, ಪರೋಕ್ಷ ಬೆಂಬಲ ನೀಡುತ್ತಿದೆ ಎಂದು ವೀರಾಜಪೇಟೆ ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಆರೋಪ ಮಾಡಿದ್ದಾರೆ.

ಗೋಣಿಕೊಪ್ಪಲುವಿನ ತಾಲೂಕು ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಇವರು, ಗೋಹತ್ಯೆ ನಿಷೇಧ ಕಾಯ್ದೆ ಜಾರಿಯ ಲ್ಲಿದ್ದರೂ ಗೋಹತ್ಯೆ ಪ್ರಕರಣಗಳು ಇತ್ತೀಚಿಗೆ ಅಧಿಕ ಗೊಳ್ಳುತ್ತಿವೆ. ಅಲ್ಲದೆ ಗೋಸಾಗಾಟಗಳು ಪೊಲೀಸರ ಸಮ್ಮುಖದಲ್ಲಿಯೇ ನಡೆಯುತ್ತಿವೆ. ಗೋ ಕಳ್ಳರಿಗೆ ಕೆಲವು ಪೊಲೀಸ್ ಅಧಿಕಾರಿಗಳು, ಪೊಲೀಸ್ ವಾಹನದ ಚಾಲಕರು ಸಂಪೂರ್ಣ ಸಹಕಾರ ನೀಡುತ್ತಿರುವುದರಿಂದ ಇಂತಹ ಪ್ರಕರಣಗಳು ನಡೆಯುತ್ತಿವೆ. ಪಕ್ಷದ ಕಾರ್ಯಕರ್ತರು ಈ ಬಗ್ಗೆ ಮಾಹಿತಿ ನೀಡಿದರೂ ಕಾರ್ಯಕರ್ತರಿಗೆ ಪೊಲೀಸರು ಬೆದರಿಸು ವುದು ಕಂಡು ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ಹಾಗೂ ಸಾಗಾಟ ವಿಚಾರದಲ್ಲಿ ಕಠಿಣ ಕ್ರಮಕೈಗೊಳ್ಳದಿದ್ದಲ್ಲಿ ತಾಲೂಕಿನ ಪ್ರತಿ ಪೊಲೀಸ್ ಠಾಣೆಯ ಮುಂದೆ ವೀರಾಜಪೇಟೆ ಬಿಜೆಪಿ ಮಂಡಲದ ಮುಂದಾಳತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದರೂ ಇಂತಹ ಘಟನೆಗಳನ್ನು ನೋಡಿಕೊಂಡು ಪಕ್ಷದ ಕಾರ್ಯಕರ್ತರು ಸುಮ್ಮನೆ ಕೂರಲು ಸಾಧ್ಯವಿಲ್ಲ. ಹೀಗಾಗಿ ಪೊಲೀಸರ ವಿರುದ್ಧ ಹೋರಾಟ ಅನಿವಾರ್ಯ ಎಂದÀÄ ಎಚ್ಚರಿಸಿದ್ದಾರೆ.

ಕೇರಳ ಗಡಿಗಳಿಂದ ಕೊಡಗಿಗೆ ಗೋಮಾಂಸ ಬರುತ್ತಿದ್ದು, ಈ ಬಗ್ಗೆ ಪೊಲೀಸರು ನಿಗಾ ವಹಿಸುತ್ತಿಲ್ಲ. ಇದರಿಂದ ರಾಜಾರೋಷವಾಗಿ ಗೋಮಾಂಸ ಮಾರಾಟ ದಂಧೆ ನಡೆಯುತ್ತಿದೆ. ಪೊಲೀಸರು ಗೋಕÀಳ್ಳರಿಗೆ ಹಾಗೂ ಮಾರಾಟದ ದಂಧೆಗೆ ಪರೋಕ್ಷ ಬೆಂಬಲ ನೀಡುತ್ತಿರುವುದರಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪೊನ್ನಂಪೇಟೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಸಾಗಾಟಗಾರರ ಪರವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಓರ್ವ ಚಾಲಕ ಬೆಂಗಾವಲಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುಂಞAಗಡ ಅರುಣ್ ಭೀಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಗೋಸಾಗಾಟ ಹಾಗೂ ಮಾಂಸ ಮಾರಾಟ ಮಾಡುತ್ತಿರು ವುದು ಖಂಡನೀಯ. ಪೊಲೀಸರ ವೈಫಲ್ಯವೇ ಇವುಗಳಿಗೆ ಕಾರಣ ವಾಗಿವೆ. ಇವುಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಕಠಿಣ ನಿರ್ಧಾರ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು. ತಾಲೂಕು ಬಿಜೆಪಿ ವಕ್ತಾರ ಕುಟ್ಟಂಡ ಅಜಿತ್‌ಕರುಂಬಯ್ಯ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಅಲ್ಲದೆ ಗೋಹತ್ಯೆ ನಿಷೇಧ ಕಾಯ್ದೆ ಪಾಲನೆಯಾಗಬೇಕು ಎಂದರು.

ಮAಡಲದ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್ ಮಾತನಾಡಿ, ಅಸ್ಸಾಮಿಗರ ಹೆಸರಿನಲ್ಲಿ ಬಾಂಗ್ಲಾದೇಶದಿAದ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಆಗಮಿಸಿದ್ದಾರೆ. ಇಂತಹವರಿAದ ಗೋಹತ್ಯೆ ಹೆಚ್ಚಾಗಿದೆ. ಕೂಲಿ ಕೆಲಸದ ನೆಪದಲ್ಲಿ ಕಾರ್ಮಿಕರಾಗಿ ಬಾಂಗ್ಲಾದೇಶದಿAದ ಬಂದಿರುವವರನ್ನು ಪತ್ತೆಹಚ್ಚಿ ವಿಚಾರಣೆಗೊಳಪಡಿಸಿ ಇವರ ಮೇಲೆ ಕಠಿಣಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವೀರಾಜಪೇಟೆ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ವಾಟೇರಿರ ಬೋಪಣ್ಣ, ಉಪಾಧ್ಯಕ್ಷ ಕುಪ್ಪಂಡ ಗಿರೀಶ್ ಪೂವಣ್ಣ, ಸಾಮಾಜಿಕ ಜಾಲತಾಣ ಘಟಕದ ಚೆರಿಯಪಂಡ ಸಚಿನ್, ಸಹವಕ್ತಾರ ಪುಲಿಯಂಡ ಪೊನ್ನಣ್ಣ ಉಪಸ್ಥಿತರಿದ್ದರು.