ಕೂಡಿಗೆ, ನ. ೩ : ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಗ್ರಾಮದ ರೇಣುಕಾ ಸ್ವಾಮಿ ಎಂಬವರ ಮನೆಯ ಗೋಡೆ ನಿನ್ನ ರಾತ್ರಿ ಕುಸಿದಿದೆ. ಅದೃಷ್ಟವಶಾತ್ ಕುಟುಂಬದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರೇಣುಕಾ ಸ್ವಾಮಿ ದಂಪತಿಗಳು ಸೇರಿದಂತೆ ಮೂವರು ಮಕ್ಕಳು ತಮ್ಮ ಮನೆಯಲ್ಲಿ ರಾತ್ರಿ ಮಲಗಿದ್ದ ಸಮಯದಲ್ಲಿ ಮನೆಯ ಗೋಡೆ ಮಳೆಯಿಂದಾಗಿ ಮನೆಯ ಹೊರಭಾಗಕ್ಕೆ ಬಿದ್ದಿದೆ.

ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಅನಂತ್ ಕುಮಾರ್ ಸೇರಿದಂತೆ ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.