ಮಡಿಕೇರಿ ನ. ೩ : ಮಾಜಿ ಪ್ರಧಾನಿ ಇಂದಿರಾಗಾAಧಿ ಅವರ ೩೭ನೇ ಪುಣ್ಯಸ್ಮರಣೆ ದಿನ ಹಾಗೂ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೪೬ನೇ ಹುಟ್ಟು ಹಬ್ಬವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟಿçÃಯ ಏಕತಾ ದಿನವನ್ನಾಗಿ ಆಚರಿಸಲಾಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಇಂದಿರಾಗಾAಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್ ದಿನದ ಮಹತ್ವದ ಕುರಿತು ಮಾತನಾಡಿದರು. ಕೆಪಿಸಿಸಿ ವಕ್ತಾರ ಹೆಚ್.ಎಸ್.ಚಂದ್ರಮೌಳಿ, ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಜಿಲ್ಲಾ ಕಾಂಗ್ರೆಸ್ ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಮಾಜಿ ಮೂಡ ಅಧ್ಯಕ್ಷ ಚುಮ್ಮಿ ದೇವಯ್ಯ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸ್ವಾತಂತ್ರö್ಯ ಹೋರಾಟ ನಡೆಸಿದ ಗುಡ್ಡೆಮನೆ ಅಪ್ಪಯ್ಯ ಗೌಡರು ಮತ್ತು ಕನ್ನಡದ ಮೇರುನಟ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.