ಮಡಿಕೇರಿ, ನ. ೩: ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದಲ್ಲಿ ಬೆಳೆದು ನಿಂತ ಭತ್ತದ ಬೆಳೆಯನ್ನು ಕಾಡಾನೆಗಳ ಹಿಂಡು ಕಳೆದ ನಾಲ್ಕು ದಿನಗಳಿಂದ ದಾಳಿ ನಡೆಸಿ ನಷ್ಟಪಡಿಸಿದೆ.
ಅರಣ್ಯಾಧಿಕಾರಿಗಳು ಆದಷ್ಟು ಬೇಗ ಕಾಡಾನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಮಾಡಬೇಕು ಮತ್ತು ನಷ್ಟಕ್ಕೆ ಪರಿಹಾರ ನೀಡಬೇಕಾಗಿ ಈ ಭಾಗದ ಜನರು ಆಗ್ರಹಿಸಿದ್ದಾರೆ.