ಭಾರತದ ಕೋವ್ಯಾಕ್ಸಿನ್‌ಗೆ Wಊಔ ಮನ್ನಣೆ

ನವದೆಹಲಿ, ನ. ೩: ಬಹಳ ದಿನಗಳಿಂದ ಕಾಯುತ್ತಿದ್ದ ಭಾರತದ ಕೋವ್ಯಾಕ್ಸಿನ್ ಕೋವಿಡ್ ಲಸಿಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ (Wಊಔ) ಮನ್ನಣೆ ನೀಡಿದ್ದು, ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ಕೊನೆಗೂ ಅನುಮೋದಿಸಿದೆ. ಕೋವ್ಯಾಕ್ಸಿನ್ ಲಸಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ತನ್ನ ಲಸಿಕೆಗಳ ತುರ್ತು ಬಳಕೆಯ ಪಟ್ಟಿ(emeಡಿgeಟಿಛಿಥಿ use ಟisಣiಟಿg - ಇUಐ)ಗೆ ಅಧಿಕೃತವಾಗಿ ಸೇರ್ಪಡೆ ಮಾಡಿದೆ. ಈ ಮೂಲಕ ಭಾರತದ ಕೋವ್ಯಾಕ್ಸಿನ್ ಲಸಿಕೆಗೆ ಜಾಗತಿಕ ಮನ್ನಣೆ ದೊರೆತಿದೆ. ಇತ್ತೀಚೆಗಷ್ಟೇ ಭಾರತ್ ಬಯೋಟೆಕ್‌ನ ಕೋವಿಡ್ ವಿರೋಧಿ ಲಸಿಕೆ ಕೋವಾಕ್ಸಿನ್‌ಗೆ ತುರ್ತು ಬಳಕೆಯ ಅಧಿಕಾರವನ್ನು ನೀಡುವ ಕುರಿತು ನಿರ್ಧರಿಸಲು ತಾಂತ್ರಿಕ ಸಲಹಾ ಗುಂಪು (ಖಿಂಉ), ವಿಶ್ವ ಆರೋಗ್ಯ ಸಂಸ್ಥೆಯ (Wಊಔ) ಸ್ವತಂತ್ರ ಸಲಹಾ ಸಮಿತಿಯು ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗಾಗಿ ಅನುಮತಿಸುವ ಕುರಿತಂತೆ ಚರ್ಚೆ ನಡೆಸಲಾಗಿತ್ತು. ಲಸಿಕೆಯ ಜಾಗತಿಕ ಬಳಕೆಗಾಗಿ ಅಂತಿಮ ತುರ್ತು ಬಳಕೆಯ ಪಟ್ಟಿ (ಇUಐ) ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವ ಸಲುವಾಗಿ ತಾಂತ್ರಿಕ ಸಮಿತಿಯು ಈ ಹಿಂದೆ ಕೋವಾಕ್ಸಿನ್‌ನ ತಯಾರಕರಾದ ಭಾರತ್ ಬಯೋಟೆಕ್‌ನಿಂದ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿತ್ತು. ಇದಕ್ಕೆ ಉತ್ತರಿಸಿದ್ದ ಭಾರತ್ ಬಯೋಟೆಕ್ ಸಂಸ್ಥೆ, ಕೋವ್ಯಾಕ್ಸಿನ್ ರೋಗ ಲಕ್ಷಣದ ಕೋವಿಡ್-೧೯ ವಿರುದ್ಧ ಶೇ.೭೭.೮ ಪರಿಣಾಮಕಾರಿತ್ವವನ್ನು ಹೊಂದಿದ್ದು, ಅಲ್ಲದೆ ಹೊಸ ಡೆಲ್ಟಾ ರೂಪಾಂತರದ ವಿರುದ್ಧ ಶೇ. ೬೫.೨ರಷ್ಟು ರಕ್ಷಣೆಯನ್ನು ಪ್ರದರ್ಶಿಸಿದೆ.

ಭಾರತದ ಅತಿವೃಷ್ಟಿಯ ಮೂಲ ಆರ್ಕ್ಟಿಕ್ ಪ್ರದೇಶದಲ್ಲಿದೆ

ನವದೆಹಲಿ, ನ. ೩: ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಭಾರತದ ಹಲವೆಡೆ ಬೀಳುತ್ತಿರುವ ಭಾರೀ ಮಳೆಗೆ ಆರ್ಕ್ಟಿಕ್ ಪ್ರದೇಶದ ಬೆಳವಣಿಗೆ ಕಾರಣವಿರಬಹುದು ಎಂದು ವಿಜ್ಞಾನಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಸಂಶೋಧನಾ ನಿಯತಕಾಲಿಕೆಯಲ್ಲಿ ಪ್ರಕಟಗೊಂಡ ಅಧ್ಯಯನ ವರದಿ ಈ ಬಗ್ಗೆ ಬೆಳಕು ಚೆಲ್ಲಿದೆ. ನೇಚರ್ ಎಂಬ ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ ಈ ಅಧ್ಯಯನದಲ್ಲಿ ಭಾರತೀಯ ಹಾಗೂ ನಾರ್ವೆ ವಿಜ್ಞಾನಿಗಳು ಭಾಗವಹಿಸಿದ್ದರು. ಉತ್ತರ ಧ್ರುವ ಪ್ರದೇಶವಾದ ಆರ್ಕ್ಟಿಕ್‌ನಲ್ಲಿ ಮಂಜುಗಡ್ಡೆ ಅತಿ ವೇಗವಾಗಿ ಕರಗುತ್ತಿರುವುದೇ ಭಾರತದಲ್ಲಿನ ಅತಿವೃಷ್ಟಿಗೆ ಕಾರಣ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಬಟರ್ ಫ್ಲೆöÊ ಎಫೆಕ್ಟ್ ಎಂದು ಕರೆಯಲಾಗುತ್ತದೆ. ಭೂಮಂಡಲದ ಯಾವುದೋ ದೂರದಲ್ಲಿ, ಖಂಡಗಳಾಚೆಗೆ ಉಂಟಾಗುವ ಬೆಳವಣಿಗೆಯಿಂದಾಗಿ ಇನ್ನೆಲ್ಲೋ ಅದರ ಪರಿಣಾಮ ಉಂಟಾಗುವುದನ್ನು ಬಟರ್ ಫ್ಲೆöÊ್ಲ ಎಫೆಕ್ಟ್ ಎನ್ನಲಾಗುತ್ತದೆ. ಈ ಬಾರಿ ಅತ್ಯಧಿಕ ಪ್ರಮಾಣದಲ್ಲಿ ಮಂಜುಗಡ್ಡೆ ಕರಗಿ ಸಮುದ್ರ ಸೇರಿದ್ದರಿಂದಾಗಿ ಅರೇಬಿಯನ್ ಸಮುದ್ರ ಪ್ರದೇಶದಲ್ಲಿ ತೇವಾಂಶ ಹೆಚ್ಚಿ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿಯೂ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ ಎನ್ನುವುದು ವಿಜ್ಞಾನಿಗಳ ಅಭಿಪ್ರಾಯ. ಮುಂದಿನ ದಿನಗಳ ಸಮುದ್ರ ಮತ್ತು ಮಂಜುಗಡ್ಡೆಯ ಪ್ರಮಾಣದ ನಡುವಿನ ಅನುಪಾತವನ್ನು ಹೆಚ್ಚಿನ ಅಧ್ಯಯನಕ್ಕೆ ಒಳಪಡಿಸುವ ಅಗತ್ಯವನ್ನು ವಿಜ್ಞಾನಿಗಳು ಒತ್ತಿ ಹೇಳಿದ್ದಾರೆ.

ಮನೆ-ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವ ಅಗತ್ಯವಿದೆ: ಪ್ರಧಾನಿ

ನವದೆಹಲಿ, ನ. ೩: ಕೋವಿಡ್-೧೯ ಲಸಿಕೆ ಅಭಿಯಾನವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಲಸಿಕೆ ಅಭಿಯಾನವನ್ನು ಹೆಚ್ಚಿಸಲು ನವೀನ ಮಾರ್ಗಗಳನ್ನು ಅಳವಡಿಸಿಕೊಳ್ಳುವಂತೆ ಲಸಿಕೆ ನೀಡಿಕೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಬುಧವಾರ ಸೂಚಿಸಿದ್ದಾರೆ. ಇಂದು ಕಡಿಮೆ ಲಸಿಕೆ ವ್ಯಾಪ್ತಿಯನ್ನು ಹೊಂದಿರುವ ೪೦ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇದುವರೆಗೂ ನೀವು ಲಸಿಕಾ ಕೇಂದ್ರದ ಬಳಿಗೆ ಜನರನ್ನು ಕರೆತರುತ್ತಿದ್ದಿರಿ. ಈಗ ನೀವೇ ಪ್ರತಿ ಮನೆಗೂ ತೆರಳಿ ಲಸಿಕೆ ನೀಡುವ ಮೂಲಕ ‘ಹರ್ ಘರ್ ದಸ್ತಕ್ ಆಂದೋಲನ’ದೊAದಿಗೆ ಕೈಜೋಡಿಸಬೇಕು ಎಂದು ಹೇಳಿದರು. ಇತ್ತೀಚೆಗೆ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಉಲ್ಲೇಖಿಸಿ ಮಾತನಾಡಿದ ಮೋದಿ, ಲಸಿಕೆ ಅಗತ್ಯ ಕುರಿತು ಧಾರ್ಮಿಕ ನಾಯಕರ ಮೂಲಕ ಜನರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಕೋವಿಡ್-೧೯ ಲಸಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ವದಂತಿಗಳ ವಿರುದ್ಧ ಹೋರಾಡಲು ಸ್ಥಳೀಯ ಧಾರ್ಮಿಕ ಮುಖಂಡರ ಸಹಾಯವನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ಜಿಲ್ಲಾದಿ üಕಾರಿಗಳನ್ನು ಸೂಚಿಸಿದರು. ಲಸಿಕೆ ಹಾಕದವರಿಗೆ ಮೊದಲ ಡೋಸ್ ನೀಡಲಾ ಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ಆದರೆ ಎರಡನೇ ಡೋಸ್‌ಗೂ ಅಷ್ಟೇ ಗಮನ ನೀಡಬೇಕು ಎಂದು ಪ್ರಧಾನಿ ಅಧಿಕಾರಿಗಳಿಗೆ ಹೇಳಿದರು.

ಕರ್ನಾಟಕ ಹೈಕೋರ್ಟ್ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು, ನ. ೩: ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ. ವಕೀಲರಾದ ಅನಂತ್ ರಾಮನಾಥ್ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನ್ಕುಳೈಲ್ ಶ್ರೀಧರನ್ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಅಕ್ಟೋಬರ್ ೬ ರಂದು ಈ ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಕರ್ನಾಟಕ ಹೈಕೋರ್ಟ್ನಲ್ಲಿ ಒಟ್ಟು ೬೨ ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ ೪೩ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಕರ್ನಾಟಕ ಸಿವಿಲ್ ಕಟ್ಟಡ ನಿರ್ಮಾಣ ಸಮೂಹದ ಮೇಲೆ ಐಟಿ ದಾಳಿ

ನವದೆಹಲಿ, ನ. ೩: ಕರ್ನಾಟಕದಲ್ಲಿ ಮುಂಚೂಣಿಯಲ್ಲಿರುವ ಸಿವಿಲ್ ಕಟ್ಟಡ ನಿರ್ಮಾಣ ಸಮೂಹದ ಮೇಲೆ ದಾಳಿ ನಡೆದ ಬಳಿಕ ರೂ. ೭೦ ಕೋಟಿಗೂ ಹೆಚ್ಚು ದಾಖಲೆಗಳಿಲ್ಲದ ಆದಾಯ ಪತ್ತೆಯಾಗಿದೆ ಎಂದು ಸಿಬಿಡಿಟಿ ಹೇಳಿದೆ. ಅ. ೨೮ ರಂದು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಈ ಶೋಧ ಕಾರ್ಯಾಚರಣೆಯಲ್ಲಿ ರೂ. ೭೦ ಕೋಟಿಯಷ್ಟು ದಾಖಲೆಗಳಿಲ್ಲದ ಆದಾಯ ಪತ್ತೆಯಾಗಿದೆ. ಸಂಸ್ಥೆ ಸಹ ಇದನ್ನು ಒಪ್ಪಿದೆ ಎಂದು ಸಿಬಿಡಿಟಿ ಹೇಳಿಕೆಯಲ್ಲಿ ತಿಳಿಸಿದೆ. ಸಿಬಿಡಿಟಿ ತೆರಿಗೆ ಇಲಾಖೆಗೆ ನೀತಿ ರೂಪಿಸುವ ಸಂಸ್ಥೆಯಾಗಿದೆ. ಸರಕುಗಳ ಖರೀದಿಯಲ್ಲಿ, ಕಾರ್ಮಿಕರ ಖರ್ಚು ವೆಚ್ಚಗಳಲ್ಲಿ ಉಪ ಗುತ್ತಿಗೆದಾರರಿಗೆ ಹಣಪಾವತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಾಭವನ್ನು ಮರೆ ಮಾಚಿದೆ ಎಂಬ ಆರೋಪ ಸಂಸ್ಥೆಯ ಮೇಲಿದೆ. ವಶಪಡಿಸಿಕೊಂಡ ದಾಖಲೆಗಳ ಪ್ರಕಾರ ದಾಖಲೆಗಳಿಲ್ಲದ ನಗದನ್ನು ಇಂತಹ ವಸ್ತುಗಳ ಮಾರಾಟಗಾರರು - ಪೂರೈಕೆದಾರರಿಂದ ಸಮೂಹ ಸಂಸ್ಥೆಗಳ ಪ್ರಮುಖ ವ್ಯಕ್ತಿಗಳು ಪಡೆದಿದ್ದರು. ಸಂಸ್ಥೆಯ ಮಾಲೀಕರ, ಯಾವುದೇ ಕೆಲಸವನ್ನೂ ಮಾಡದ ಕುಟುಂಬ ಸದಸ್ಯರು, ಸ್ನೇಹಿತರು, ಉದ್ಯೋಗಿಗಳನ್ನೇ ಉಪಗುತ್ತಿಗೆದಾರರ ಹೆಸರಿನಲ್ಲಿ ಹಣ ಪಡೆದು ಲಾಭ ಮರೆಮಾಚುವುದಕ್ಕೆ ಸಹಕರಿಸುತ್ತಿದ್ದರು ಎಂದು ಸಿಬಿಡಿಟಿ ಹೇಳಿದೆ.

ಗಂಗಾ ನದಿ ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸವಲ್ಲ

ನವದೆಹಲಿ, ನ. ೩: ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸ ಎಂದು ಭಾವಿಸದೇ ಇದರಲ್ಲಿ ಸಾರ್ವಜನಿಕರ ಜವಾಬ್ದಾರಿಯೂ ಇದೆ ಎಂದು ಪರಿಗಣಿಸಬೇಕಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಬುಧವಾರ ಹೇಳಿದ್ದಾರೆ. ಗಂಗಾ ಉತ್ಸವದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ತಾವು ಪರಿಸರದ ಪಾಲಕರು ಎಂದು ಭಾವಿಸಬೇಕು ಎಂದರು. ಈ ಪರಿಸರದ ಪಾಲಕನ ಪಾತ್ರ ನಮ್ಮದು, ಅದನ್ನು ಉತ್ತಮಪಡಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕೇ ವಿನಃ ಮತ್ತಷ್ಟು ಹಾಳು ಮಾಡಬಾರದು. ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸವಲ್ಲದೆ ತನ್ನ ಜವಾಬ್ದಾರಿ ಇದೆ ಎಂದು ಸಮಾಜ ಯೋಚಿಸಬೇಕಿದೆ ಎಂದು ಜಲಶಕ್ತಿ ಸಚಿವರು ಹೇಳಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ, ಗಂಗಾ ನದಿಯನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಬೇಕಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ, ಸ್ವಚ್ಛ ಗಂಗಾ ಮಿಷನ್ ಯಶಸ್ವಿಯಾಗಲಿದೆ ಎಂದು ನನಗೆ ವಿಶ್ವಾಸವಿದೆ ಎಂದರು.