ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ
ನೌಶೆರಾ, ನ. ೪: ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಈ ವೇಳೆ ಸೇನಾಪಡೆಗಳನ್ನು ಕೊಂಡಾಡಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಪ್ರಧಾನಿ ಮೋದಿ ಗಡಿಯಲ್ಲಿರುವ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿದ್ದು, ಜಮ್ಮು-ಕಾಶ್ಮೀರದ ನೌಶೆರಾದಲ್ಲಿ ಯೋಧರೊಂದಿಗೆ ಬೆಳಕಿನ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಜಮ್ಮು-ಕಾಶ್ಮೀರದ ನೌಶೇರಾಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಯೋಧರ ಭೇಟಿಗೂ ಮುನ್ನ ಹುತಾತ್ಮ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಯೋಧರನ್ನುದ್ದೇಶಿಸಿ ಮಾತನಾಡಿರುವ ಅವರು, ನಾನು ಪ್ರತಿ ದೀಪಾವಳಿಯನ್ನು ನಮ್ಮ ಗಡಿ ಕಾಯುವ ಸೈನಿಕರೊಂದಿಗೆ ಕಳೆದಿದ್ದೇನೆ. ಇಂದು ಇಲ್ಲಿ ನಮ್ಮ ಸೈನಿಕರಿಗಾಗಿ ಕೋಟ್ಯಂತರ ಭಾರತೀಯರ ಆಶೀರ್ವಾದವನ್ನು ನನ್ನೊಂದಿಗೆ ತಂದಿದ್ದೇನೆ. ನಮ್ಮ ಸೈನಿಕರು ‘ಮಾ ಭಾರತಿ'ಯ ‘ಸುರಕ್ಷಾ ಕವಚ'ವಾಗಿದ್ದಾರೆ. ಇಂದು ನನ್ನ ಎದುರು ಕೆಚ್ಚೆದೆಯ ಸೋದರರು- ಸೋದರಿಯರಿದ್ದೀರಿ. ನಿಮ್ಮ ಮಾತೃಭೂಮಿಗಾಗಿ ನೀವೆಲ್ಲರೂ ಧೈರ್ಯದಿಂದ ಹೋರಾಡುತ್ತಿದ್ದೀರಿ. ನಮ್ಮ ತಾಯ್ನಾಡನ್ನು ಕಾಪಾಡಲೇಬೇಕೆಂಬ ಹಠ, ಬದ್ಧತೆ ನಿಮ್ಮ ಕಣ್ಣುಗಳಲ್ಲಿ ಕಾಣುತ್ತಿದೆ. ನಿಮ್ಮಿಂದಾಗಿಯೇ ನಾವಿಂದು ನಿಶ್ಚಿಂತೆಯಿAದ ನಿದ್ರೆ ಮಾಡುತ್ತಿದ್ದೇವೆ, ದೇಶಾದ್ಯಂತ ಸಂಭ್ರಮದಿAದ, ಯಾವುದೇ ಭಯವಿಲ್ಲದೆ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಟೀಮ್ ಇಂಡಿಯಾ ಕೋಚ್ ಆಗಿ ದ್ರಾವಿಡ್ ನೇಮಕ
ಮುಂಬೈ, ನ. ೪: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಈ ಮೂಲಕ ಭಾರತ ಕ್ರಿಕೆಟ್ ತಂಡದಲ್ಲಿ ಮತ್ತೆ ದ್ರಾವಿಡ್ ಪರ್ವ ಶುರುವಾಗಲಿದೆ. ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನ್ಯೂಜಿಲೆಂಡ್ ವಿರುದ್ಧದ ಸರಣಿ ವೇಳೆ ದ್ರಾವಿಡ್ ಟೀಮ್ ಇಂಡಿಯಾ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಟಿ೨೦ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿಶಾಸ್ತಿç ಅವರ ಕಾರ್ಯಾವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಅಹ್ವಾನಿಸಿತ್ತು. ಈ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅರ್ಜಿ ಹಾಕಿದ್ದರು. ಇದೀಗ ದ್ರಾವಿಡ್ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಅಂಡರ್ ೧೯ ಟೀಮ್ ಇಂಡಿಯಾ ಹಾಗೂ ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ರಾಹುಲ್ ದ್ರಾವಿಡ್ ಕಳೆದ ಬಾರಿ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡದ ಹಂಗಾಮಿ ಕೋಚ್ ಆಗಿ ಕೆಲಸ ಮಾಡಿದ್ದರು.
ಗ್ರೂಪ್ ಕ್ಯಾಪ್ಟನ್ ಆಗಿ ಅಭಿನಂದನ್ ಬಡ್ತಿ
ನವದೆಹಲಿ, ನ. ೪: ಪಾಕಿಸ್ತಾನದ ಪಾಲಿಗೆ ನಡುಕ ಹುಟ್ಟಿಸಿದ್ದ ಅಭಿನಂದನ್ ವರ್ಧಮಾನ್‌ಗೆ ಸೇನೆ ದೀಪಾವಳಿ ಗಿಫ್ಟ್ ಕೊಟ್ಟಿದೆ. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ಅವರಿಗೆ "ಗ್ರೂಪ್ ಕ್ಯಾಪ್ಟನ್" ಶ್ರೇಣಿಗೆ ಬಡ್ತಿ ನೀಡಲಾಗಿದೆ. ಭಾರತೀಯ ಸೇನೆಯಲ್ಲಿ "ಗ್ರೂಪ್ ಕ್ಯಾಪ್ಟನ್" ಅನ್ನೋದು "ಕರ್ನಲ್" ಹುದ್ದೆಗೆ ಸಮವಾಗಿರುತ್ತದೆ.