*ಗೋಣಿಕೊಪ್ಪ, ನ. ೩: ಘನ ತ್ಯಾಜ್ಯ ಘಟಕಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗಳ ಬಗ್ಗೆ ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕಿನ ಕ್ಷೇತ್ರ ಮಟ್ಟದ ಸ್ವಸಹಾಯ ಸಂಘಗಳ ಗ್ರಾಮೀಣ ಮಹಿಳೆಯರಿಗೆ ತರಬೇತಿಯನ್ನು ನೀಡಲಾಯಿತು. ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಾತ್ಮಗಾಂಧಿ ಗ್ರಾಮೀಣ ಇಂದನ ಅಭಿವೃದ್ದಿ ಸಂಸ್ಥೆ, ಟಿಪ್ ಸ್ಪೆಷನ್ಸ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ೫ ದಿನಗಳ ತರಬೇತಿಯನ್ನು ನೀಡಲಾಯಿತು. ಭಾಗವಹಿಸಿದ ಸಂಜೀವಿನ ಮಹಿಳಾ ಒಕ್ಕೂಟದ ಮಹಿಳೆಯರಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳು, ತರಬೇತುದಾರರು ಹಾಗೂ ಮೇಲ್ವಿಚಾರಕರು ಹಾಜರಿದ್ದರು.