ಮಡಿಕೇರಿ, ನ. ೪ : ಭಾಗಮಂಡಲ ಭಗಂಡೇಶ್ವರ ದೇವಾಲಯ, ತಲಕಾವೇರಿ ದೇವಾಲಯ ಹಾಗೂ ನಗರದ ಶ್ರೀ ಓಂಕಾರೇಶ್ವರ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಹಣ್ಣುಕಾಯಿ ಸೇವೆಗೆ ಅನುಕೂಲವಾಗುವಂತೆ ಬಿದಿರಿನ ಬುಟ್ಟಿಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀ ಭಗಂಡೇಶ್ವರ - ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ. ಕೃಷ್ಣಪ್ಪ ತಿಳಿಸಿದ್ದಾರೆ.