ಮಡಿಕೇರಿ, ನ. ೩: ಸಂಪಾಜೆ ಗ್ರಾಮದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ನಿರ್ಮಲ ಭರತ್ ಅಧ್ಯಕ್ಷತೆಯಲ್ಲಿ ಹಾಗೂ ನೋಡೇಲ್ ಅಧಿಕಾರಿ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಸ್ನೇಹಾ ದರ್ಶನ್, ಉಪಸ್ಥಿತಿಯಲ್ಲಿ ನಡೆಯಿತು.
ಹಿಂದಿನ ೬ ಸಭೆಯ ವರದಿಯನ್ನು ಮಂಡನೆ ಮಾಡಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಂದ ಇಲಾಖೆಗೆ ಸಂಬAಧಿಸಿದ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು, ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡ್ಗಳ ಗ್ರಾಮಸ್ಥರ ಬೇಡಿಕೆಯ ಅರ್ಜಿಯನ್ನು ಸ್ವೀಕರಿಸಲಾಯಿತು. ೬೬ ಕೆ.ವಿ.ಎ. ವಿದ್ಯುತ್ ವಿತರಣಾ ಕೇಂದ್ರವನ್ನು ಸಂಪಾಜೆಯಲ್ಲಿ ಸ್ಥಾಪಿಸುವಂತೆ ಗ್ರಾಮಸಭೆಯಲ್ಲಿ ನಿರ್ಣಯಿಸಲಾಯಿತು. ಈ ಸಂದರ್ಭ ಗ್ರಾ.ಪಂ. ಸದಸ್ಯರು, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.