ಕೂಡಿಗೆ, ನ.೩ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಮಕ್ಕಳು ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಜಾಗರೂಕತೆ ಹಾಗೂ ಸುರಕ್ಷತೆಯಿಂದ ಹಸಿರು ದೀಪಾವಳಿ ಆಚರಿಸಲು ಹಿರಿಯರು ಪ್ರೇರೇಪಿಸಬೇಕಿದೆ ಎಂದು ಕೊಡಗು ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ , ಎನ್.ಎಸ್.ಎಸ್. ಹಾಗೂ ಎಸ್.ಡಿ.ಎಂ.ಸಿ. ಆಶ್ರಯದಲ್ಲಿ "ಪರಿಸರ ಸ್ನೇಹಿ ಹಸಿರು ದೀಪಾವಳಿ" ಆಚರಣೆ ಕುರಿತು ಏರ್ಪಡಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಹಣತೆ ಬೆಳಗಿಸಿ ಹಸಿರು ದೀಪಾವಳಿ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಪರಿಸರಕ್ಕೆ ಪೂರಕವಾದ ಹಸಿರು ದೀಪಾವಳಿ ಆಚರಿಸಲು ಸಂಕಲ್ಪ ತೊಡಬೇಕು ಎಂದರು.

ಪರಿಸರಕ್ಕೆ ಮಾಲಿನ್ಯವನ್ನುಂಟು ಮಾಡುವ ಪಟಾಕಿಗಳು ಹೊರ ಸೂಸುವ ವಿಷಯುಕ್ತ ಅನಿಲಗಳು ಆರೋಗ್ಯ ಸಂಬAಧಿತ ಕಾಯಿಲೆಗಳು ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತವೆ. ಈ ದಿಸೆಯಲ್ಲಿ ನಾವು ಹಣತೆ ಬೆಳಗಿಸುವ ಮೂಲಕ ಹಸಿರು ದೀಪಾವಳಿ ಆಚರಣೆಗೆ ಹೆಚ್ಚಿನ ಒತ್ತು ನೀಡಬೇಕೆಂದರು.

ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದ ಇಕೋ-ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಆಕಸ್ಮಿಕ ಅವಘಡಗಳು ಸಂಭವಿಸುವುದರೊAದಿಗೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದರು.

ಪಟಾಕಿ ತ್ಯಜಿಸಿ ಹಣತೆಗಳನ್ನು ಹಚ್ಚುವ ಮೂಲಕ ದೀಪಾವಳಿ ಆಚರಿಸಲು ಮುಂದಾಗಬೇಕಿದೆ ಎಂದರು.

ಹಸಿರು ದೀಪಾವಳಿ ಆಚರಣೆ ಕುರಿತ ಕರಪತ್ರ ಬಿಡುಗಡೆಗೊಳಿಸಿದ ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಟಿ.ದಯಾನAದ ಪ್ರಕಾಶ್, ನಾವು ಪಟಾಕಿ ಮುಕ್ತ ಸುರಕ್ಷತೆ ಮತ್ತು ಆರೋಗ್ಯಕರ ಹಸಿರು ದೀಪಾವಳಿ ಆಚರಿಸಬೇಕಿದೆ ಎಂದರು.

ಗ್ರಾ.ಪA. ಸದಸ್ಯರಾದ ಶಶಿಕಲಾ, ಶಿವಮ್ಮ ಮಾತನಾಡಿದರು. ಎನ್ನೆಸ್ಸೆಸ್ ಅಧಿಕಾರಿ ಡಿ.ರಮೇಶ್, ಶಿಕ್ಷಕರಾದ ಬಿ.ಡಿ.ರಮ್ಯ, ಎಸ್.ಎಂ. ಗೀತಾ, ಅನ್ಸಿಲಾ ರೇಖಾ ಇದ್ದರು.

ನಂತರ ನಡೆದ ಹಸಿರು ದೀಪಾವಳಿ ಪರಿಸರ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳು ಹಣತೆ ಬೆಳಗಿಸಿ ದೀಪಾವಳಿ ಆಚರಿಸಿ, ಪಟಾಕಿ ತ್ಯಜಿಸಿ ಮಾಲಿನ್ಯ ತಡೆಯಿರಿ, ಪಟಾಕಿ ಮುಕ್ತ ದೀಪಾವಳಿ ಆಚರಸೋಣ ಬನ್ನಿ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರ ಪಡಿಸಿದರು.

ಹಸಿರು ದೀಪಾವಳಿ ಆಚರಣೆ ಕುರಿತು ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.