ಕೂಡಿಗೆ, ನ. ೪: ಕೂಡಿಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಸಿರು ದೀಪಾವಳಿ ಅಚರಣೆಯನ್ನು ಸಡಗರ ಸಂಭ್ರಮದಿAದ ಸಿಬ್ಬಂದಿಗಳು ಆಚರಣೆ ಮಾಡಿದರು. ದೀಪ ಬೆಳಗುವುದರ ಮೂಲಕ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷಿö್ಮ ಉದ್ಘಾಟಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಗ್ರಂಥಾಲಯ ಆವರಣದಲ್ಲಿ ವಿವಿಧ ಬಣ್ಣದ ರಂಗೋಲಿ ಹಾಕಲಾಗಿತ್ತು. ಹಬ್ಬದ ಅಂಗವಾಗಿ ಗ್ರಾ.ಪಂ. ಕಟ್ಟಡವು ವಿದ್ಯುತ್ ದೀಪಗಳಿಂದ ಅಲಂಕೃತವಾಗಿತ್ತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಅಭಿವೃದ್ಧಿ ಅಧಿಕಾರಿ ಅಯಿಷಾ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು