ಸಿದ್ದಾಪುರ, ನ. ೪: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ಅಗತ್ಯ ವಸ್ತುಗಳ ಕಿಟ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭ ಸೋಮ ವಾರಪೇಟೆ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕರಾದ ಲೀನ ಹಾಗೂ ಸಮಾಜ ಸೇವಕ ಮಣಿ ಮೊಹಮ್ಮದ್, ಎ.ಡಿ.ವೈ.ಎಫ್. ಸಂಘಟನೆಯ ಜಿಲ್ಲಾಧ್ಯಕ್ಷ ರಫೀಕ್ ನವಲಗುಂದ, ಕಟ್ಟಡ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎ ಕೃಷ್ಣ, ಎ.ಐ.ಟಿ.ಯು.ಸಿ. ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ವಿ. ಸುನಿಲ್ ಇನ್ನಿತರರು ಹಾಜರಿದ್ದರು. ೨೨ ಮಂದಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು. ಇದೇವೇಳೆ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಅಧಿಕಾರಿಗಳು ವಿತರಿಸಿದರು.