ನಾಪೋಕ್ಲು, ನ. ೪: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಾಪೋಕ್ಲು ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಾನವ ಕಳ್ಳ ಸಾಗಾಣಿಕೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿವಿಲ್ ನ್ಯಾಯಾಧೀಶರಾದ ಸುಬ್ರಮಣ್ಯ, ಸಾಮಾಜಿಕ ಪಿಡುಗುಗಳ ತುಳಿತಕ್ಕೆ ಒಳಗಾದವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ, ಸ್ಥಾನಮಾನಗಳ ಬಗ್ಗೆ, ಕಾನೂನಿನ ನಿಯಮ, ಧರ್ಮದ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ ಮಕ್ಕಳ ಹಕ್ಕುಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲೆ ಕಲ್ಯಾಟಂಡ ಶಾರದ ಅಪ್ಪಣ್ಣ ವಹಿಸಿದ್ದರು. ಈ ಸಂದರ್ಭ ಪೊಲೀಸ್ ಇಲಾಖೆಯ ಮಹೇಶ್, ದರ್ಶನ್, ಶಿಕ್ಷಕ ಭಗವತಿ ಪ್ರಸಾದ್, ಶಿಕ್ಷಕ ವೃಂದ, ವಿದಾರ್ಥಿಗಳು ಇದ್ದರು.