ಮಡಿಕೇರಿ, ನ. ೪ : ಭಾರತದ ಸಮಗ್ರತೆ ಮತ್ತು ಏಕತೆಗೆ ಹಾಗೂ ಅಖಂಡ ಭಾರತದ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ಚೇತನ ಸರ್ದಾರ್ ವಲ್ಲಭಬಾಯ್ ಪಟೇಲ್ ಎಂದು ಹಿರಿಯ ವಕೀಲ ಎಂ.ಎ. ನಿರಂಜನ್ ಹೇಳಿದರು. ಕೊಡಗು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನಾಚರಣೆಯಲ್ಲಿ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಭಾರತ ಬಲಿಷ್ಠವಾದ ಸೇನೆಯನ್ನು ಕಟ್ಟಲು ಕಾರಣರಾದ ಸರ್ಧಾರ್ ವಲ್ಲಭಬಾಯ್ ಪಟೇಲ್ ಅವರು ರಾಷ್ಟçದ ಐಕ್ಯತೆಗೆ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ ಸ್ವಾಗತಿಸಿ, ವಂದಿಸಿದರು.