ಗೋಣಿಕೊಪ್ಪಲು, ನ. ೪: ಕರ್ನಾಟಕ ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರ ಸಂಘದ ಪೊನ್ನಂಪೇಟೆ ನೂತನ ತಾಲೂಕು ಅಧ್ಯಕ್ಷರಾಗಿ ಗೋಣಿಕೊಪ್ಪಲುವಿನ ಆರ್. ವಿಜಯ್‌ಕುಮಾರ್ ಆಯ್ಕೆಯಾಗಿದ್ದಾರೆ.

ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ರಾಜು ಈ ಬಗ್ಗೆ ಆದೇಶ ಪತ್ರ ನೀಡಿದ್ದು, ಸಂಘದ ನಿಯಮಾವಳಿಗೆ ಬದ್ದರಾಗಿ ಕೆಲಸ ನಿರ್ವಹಿಸುವಂತೆ ತಿಳಿಸಿದ್ದಾರೆ. ಕಳೆದ ೧೯ ವರ್ಷಗಳಿಂದ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ವಿಜಯ್‌ಕುಮಾರ್ ಹಲವು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.