ಮಡಿಕೇರಿ, ನ. ೬ : ಪ್ರಸಕ್ತ (೨೦೨೧-೨೨) ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‌ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ssಠಿ.ಠಿosಣmeಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ
ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, (ಮೆಟ್ರಿಕ್ ವಂತರದ ಕೋರ್ಸುಗಳಿಗೆ ಆದಾಯದ ಮಿತಿ ೨.೫೦ಲಕ್ಷ ಮತ್ತು ಮೆಟ್ರಿಕ್ ಪೂರ್ವ ೧ ರಿಂದ ೮ ನೇ ತರಗತಿ ವಿದ್ಯಾರ್ಥಿಗಳಿಗೆ ೬ ಲಕ್ಷ, ಹಾಗೂ ೯ ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ೨.೫೦ ಲಕ್ಷ ಆದಾಯ ಮಿತಿಗೊಳಿಸಲಾಗಿದೆ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್, (ಕಡ್ಡಾಯವಾಗಿ ಆದಾರ್ ಸೀಡಿಂಗ್ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಮಾಡಿಸಿರತಕ್ಕದ್ದು), ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಮೆಟ್ರಿಕ್ ನಂತರದ ಕೋರ್ಸುಗಳಿಗೆ ಆಧ್ಯಯನ/ಬೋನಾಪೈಡ್ ಪ್ರಮಾಣ ಪತ್ರ ಕಡ್ಡಾಯ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ತಿತಿತಿ.ssಠಿ.ಠಿosಣmeಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-೦೮೨೭೪-೨೬೧೨೬೧., ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರು (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-೦೮೨೭೬-೨೮೧೧೧೫. ಸಂಪರ್ಕಿಸಬಹುದಾಗಿದೆ ಎಂದು ಯೋಜನಾ ಸಮನ್ವಾದಿಕಾರಿ ಶ್ರೀನಿವಾಸ್ ಕೋರಿದ್ದಾರೆ.