ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವತಿಯಿಂದ ಕನ್ನಡ ರಾಜೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಶಾಲಾ ಮಕ್ಕಳು, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ. ಮತ್ತು ಪೋಷಕ ವೃಂದದವರು ಸೇರಿ ಮೆರವಣಿಗೆ ನಡೆಸಿ ನಂತರ ಇಲ್ಲಿನ ಡಾ. ಶಿವಕುಮಾರ್ ಸ್ವಾಮೀಜಿ ಯವರ ವೃತ್ತದ ಬಳಿ ಶಾಲಾ ಮಕ್ಕಳಿಂದ ಕನ್ನಡ ಗೀತೆಯೊಂದಿಗೆ ನೃತ್ಯ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ತೆರೆದ ವಾಹನದಲ್ಲಿ ಕನ್ನಡ ಹೋರಾಟಗಾರರ ವೇಷಧರಿಸಿದ ಮಕ್ಕಳ ತಂಡವು ಮೆರವಣಿಗೆಯಲ್ಲಿ ಸಾಗಿ ಬಂತು. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ. ಅಧ್ಯಕ್ಷ ಪರಮೇಶ್ ಮುಂತಾದವರು ಹಾಜರಿದ್ದರು. ಪರಮೇಶ್ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕ ಸಣ್ಣಸ್ವಾಮಿ ಅವರು ಸರ್ವರನ್ನು ಸ್ವಾಗತಿಸಿದರು. ಮಡಿಕೇರಿ: ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ದಾಕ್ಷಯಿಣಿ ವಾಸುದೇವ್ ವಹಿಸಿದ್ದರು. ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚಾನೆ ಅರ್ಪಿಸುವುದರ ಮೂಲಕ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ್ ವಾಸುದೇವ್ ಚಾಲನೆ ನೀಡಿದರು. ನಂತರ ದಿನದ ಮಹತ್ವದ ಕುರಿತು, ನಾಡು ನುಡಿಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಕುರಿತು ಮಾತನಾಡಿದರು.
ಪ್ರಾರಂಭದಲ್ಲಿ ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಪೂಜಾರ್ ಸರ್ವರನ್ನು ಸ್ವಾಗತಿಸಿದರು. ದಿನದ ಮಹತ್ವದ ಕುರಿತು ಸಹ ಶಿಕ್ಷಕರಾದ ವಿನೋದ್‌ಕುಮಾರ್, ನಾಗರಾಜ್, ಸಹಶಿಕ್ಷಕಿ ಪಾರ್ವತಿ ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಗೌರಮ್ಮ ನಿರೂಪಿಸಿದರು. ವಂದನಾರ್ಪಣೆಯನ್ನು ತೋಟಗಾರಿಕ ಶಿಕ್ಷಕ ತಿಮ್ಮಯ್ಯ ನೆರವೇರಿಸಿದರು. ಕಾರ್ಯಕ್ರಮವನ್ನು ಸಿಹಿ ಹಂಚುವುದರ ಮೂಲಕ ಮುಕ್ತಾಯಗೊಳಿಸಲಾಯಿತು.ಮಡಿಕೇರಿ: ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ದಾಕ್ಷಯಿಣಿ ವಾಸುದೇವ್ ವಹಿಸಿದ್ದರು. ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚಾನೆ ಅರ್ಪಿಸುವುದರ ಮೂಲಕ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ್ ವಾಸುದೇವ್ ಚಾಲನೆ ನೀಡಿದರು. ನಂತರ ದಿನದ ಮಹತ್ವದ ಕುರಿತು, ನಾಡು ನುಡಿಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಕುರಿತು ಮಾತನಾಡಿದರು.
ಪ್ರಾರಂಭದಲ್ಲಿ ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಪೂಜಾರ್ ಸರ್ವರನ್ನು ಸ್ವಾಗತಿಸಿದರು. ದಿನದ ಮಹತ್ವದ ಕುರಿತು ಸಹ ಶಿಕ್ಷಕರಾದ ವಿನೋದ್‌ಕುಮಾರ್, ನಾಗರಾಜ್, ಸಹಶಿಕ್ಷಕಿ ಪಾರ್ವತಿ ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಗೌರಮ್ಮ ನಿರೂಪಿಸಿದರು. ವಂದನಾರ್ಪಣೆಯನ್ನು ತೋಟಗಾರಿಕ ಶಿಕ್ಷಕ ತಿಮ್ಮಯ್ಯ ನೆರವೇರಿಸಿದರು. ಕಾರ್ಯಕ್ರಮವನ್ನು ಸಿಹಿ ಹಂಚುವುದರ ಮೂಲಕ ಮುಕ್ತಾಯಗೊಳಿಸಲಾಯಿತು.ಕಡಂಗ: ಸಮೀಪದ ವಿಜಯ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಗೀತಾ ಮತ್ತು ಉಪಾಧ್ಯಾಯರ ಸಮ್ಮುಖದಲ್ಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳು ನಾಡಗೀತೆಗಳನ್ನು ಹಾಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.ಶನಿವಾರಸಂತೆ: ಶನಿವಾರಸಂತೆಯ ಚಿನ್ನಳ್ಳಿ ರಸ್ತೆಯಲ್ಲಿರುವ ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ, ಕಾರ್ಮಿಕ ಹಾಗೂ ಇತರೆ ಕೂಲಿ ಕಾರ್ಮಿಕರ ಸಂಘದ ಕಚೇರಿಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಧ್ವಜಾರೋಹಣವನ್ನು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವಿಠಲನಾಗರಾಜು ನೆರವೇರಿಸಿ ದಿನದ ಬಗ್ಗೆ ಮಾತನಾಡಿದರು. ಈ ಸಂದರ್ಭ ಕಾರ್ಯದರ್ಶಿ ಲೋಕೇಶ್, ಸಂಘದ ಪದಾಧಿಕಾರಿಗಳಾದ ರವಿ, ಫರೀದ್, ಸತೀಶ್, ರತ್ನಾಕರ ಆಚಾರ್ಯ, ಕಂಪ್ಯೂಟರ್ ವ್ಯವಸ್ಥಾಪಕಿ ನಂದಿನಿ ಇತರರಿದ್ದು, ನಂದಿನಿ ವಂದಿಸಿದರು.
ಕೂಡಿಗೆ: ಕೂಡಿಗೆ ಸೈನಿಕ ಶಾಲೆಯಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದ ಆಚರಣೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮೈಸೂರಿನ ಸಿಪಿಡಬ್ಲ್ಯೂಡಿಯ ಅಧೀಕ್ಷಕ ಅಭಿಯಂತರ ಡಿ.ಎಸ್. ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.
ಶಾಲೆಯ ರಾಷ್ಟçಕವಿ ಕುವೆಂಪು ವಿವಿದೋದ್ಧೇಶ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ದಿವಂಗತ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಶಾಲೆಯ ಕನ್ನಡ ಭಾಷಾ ಶಿಕ್ಷಕ ಪ್ರಸಾದ್ ಎಂ.ಹೆಚ್. ‘ಕನ್ನಡ ನಾಡು-ನುಡಿ ಮತ್ತು ಸಂಸ್ಕೃಯ ಬೆಳವಣಿಗೆಯಲ್ಲಿ ಸೈನಿಕ ಶಾಲೆ ಕೊಡಗಿನ ಪಾತ್ರ’ ಕುರಿತು ಉಪನ್ಯಾಸ ನೀಡಿದರು. ಆಂಗ್ಲಭಾಷಾ ಶಿಕ್ಷಕ ಬಿ.ರಾಜ್. ಗೋಲ್ಕರ್ ಅವರು ‘ಕರ್ನಾಟಕದಲ್ಲಿ ಭಾಷಾ ಸಂವರ್ಧನೆ’ ಹಾಗೂ ಶಿಕ್ಷಕ ಅಶೋಕನ್ ಎನ್.ವಿ. ‘ಕುವೆಂಪುರವರ ಸಾಹಿತ್ಯ ವಿಚಾರಧಾರೆಯ ಮೇಲೆ ಸ್ವಾಮಿ ವಿವೇಕಾನಂದರ ಪ್ರಭಾವ’ ವಿಷಯವನ್ನಾಧರಿಸಿ ಉಪನ್ಯಾಸ ನೀಡಿದರು.
ಕರ್ನಾಟಕ ಏಕೀಕರಣ ಹೋರಾಟದ ವಿಷಯವನ್ನಾಧರಿಸಿದ ದೃಶ್ಯಾವಳಿಯನ್ನು ಪ್ರದರ್ಶಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸೃತಿ ಇಲಾಖೆಯ ಸಹಯೋಗದೊಂದಿಗೆ ಹರಿಕಥೆ ಪ್ರದರ್ಶನವನ್ನು ಹರಿಕಥಾ ಕಲಾವಿದ ಸಚಿನ್ ಅವರ ನೇತೃತ್ವದಲ್ಲಿ ನಡೆಯಿತು. ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ. ಕಣ್ಣನ್ ಮುಖ್ಯ ಅತಿಥಿಗಳನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಉಪ ಪ್ರಾಂಶುಪಾಲೆ ಲೆಫ್ಟಿನೆಂಟ್ ಕರ್ನಲ್ ಸೀಮಾ ತಿಪಾಠಿ, ಶಾಲಾ ವೈದ್ಯಾಧಿಕಾರಿ ಡಾ. ಮಹೇಶ್, ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ಶಾಲಾ ಸಿಬ್ಬಂದಿ ವರ್ಗದ ಕುಟುಂಬ ಸದಸ್ಯರು ಹಾಜರಿದ್ದರು.ವೀರಾಜಪೇಟೆ: ವೀರಾಜಪೇಟೆ ನಗರದ ಮೂರ್ನಾಡು ರಸ್ತೆಯ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿ ವತಿಯಿಂದ ಮೂರ್ನಾಡು ರಸ್ತೆಯ ವೃತ್ತದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಸಲ್ಲಿಸಲಾಯಿತು. ಕಾವೇರಿ ಗಣೇಶೋತ್ಸವ ಸಮಿತಿಯ ಸದಸ್ಯರು ಕನ್ನಡ ನಾಡಗೀತೆಯನ್ನು ಪ್ರಸ್ತುತಪಡಿಸಿದರು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಬಳಿಕ ಅಕಾಲಿಕ ಮರಣಕ್ಕೆ ತುತ್ತಾದ ಕನ್ನಡ ಮೇರು ನಟ ಪುನಿತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷಗಳ ಕಾಲ ಮೌನ ಪ್ರಾರ್ಥನೆ ನೆರವೇರಿಸಲಾಯಿತು. ಈ ಸಂದರ್ಭ ಮಾತನಾಡಿದ ವಕೀಲ ವಿ.ಜಿ. ರಾಕೇಶ್, ಮೃತರಾದ ಪುನಿತ್ ರಾಜ್‌ಕುಮಾರ್ ಅವರು ಧೀಮಂತ ವ್ಯಕ್ತಿಯಾಗಿದ್ದರು. ಸಾಮಾಜಿಕ ಕಳಕಳಿಯಿಂದಾಗಿ ಸಮಾಜಕ್ಕೆ ತನ್ನದೇಆದ ಶೈಲಿಯಲ್ಲಿ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಮಾನಸದಲ್ಲಿ ವಿರಾಜಮಾನರಾಗಿದ್ದರು ಎಂದರು. ಈ ಸಂದರ್ಭ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.