ಮಡಿಕೇರಿ, ನ. ೬: ಜಿಲ್ಲೆಯಾದ್ಯಂತ ಎಲ್.ಕೆ.ಜಿ ಮತ್ತು ಯು.ಕೆ.ಜಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ಅದರಂತೆ ಕೋವಿಡ್-೧೯ ಹಾಗೂ ಎಸ್‌ಒಪಿ ಮಾರ್ಗಸೂಚಿ ಅನ್ವಯ ಎಲ್ಲಾ ಎಲ್‌ಕೆಜಿ ಮತ್ತು ಯುಕೆಜಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಿದ್ದು, ಜಿಲ್ಲೆಯಲ್ಲಿರುವ ಒಟ್ಟು ೭೪ ಶಾಲೆಗಳು ತಾ. ೮ ರಿಂದ (ನಾಳೆಯಿಂದ) ಪ್ರಾರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಟಿ. ಮಂಜುನಾಥ್ ತಿಳಿಸಿದ್ದಾರೆ.

ಮಡಿಕೇರಿ ತಾಲೂಕಿನಲ್ಲಿ ೧೮ ಶಾಲೆ, ಸೋಮವಾರಪೇಟೆ ತಾಲೂಕಿನಲ್ಲಿ ೨೪, ವೀರಾಜಪೇಟೆ ತಾಲೂಕಿನಲ್ಲಿ ೩೨ ಒಟ್ಟು ೭೪ ಶಾಲೆಗಳು ಪ್ರಾರಂಭವಾಗಲಿದ್ದು, ಎಲ್‌ಕೆಜಿಯಲ್ಲಿ ೧೦೭೭ ವಿದ್ಯಾರ್ಥಿಗಳು, ಯುಕೆಜಿಯಲ್ಲಿ ೧೫೭೩ ವಿದ್ಯಾರ್ಥಿಗಳು ಒಟ್ಟು ೨,೬೫೦ ವಿದ್ಯಾರ್ಥಿಗಳಿದ್ದಾರೆ ಎಂದು ತಿಳಿಸಿದ್ದಾರೆ.