ಮಡಿಕೇರಿ, ನ. ೭: ಜನವರಿ ೧, ೨೦೨೨ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು ೧೮ ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-೬ ರಲ್ಲಿ ಹೆಸರು ಸೇರ್ಪಡೆಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಕೋರಿದ್ದಾರೆ.

ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರರ್ವತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-೭ ರಲ್ಲಿ ಸರಿಪಡಿಸಲು ಮನವಿ ಮಾಡಿದ್ದಾರೆ. ಹಾಗೆಯೇ ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-೮ ರಲ್ಲಿ ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-೮ಎ ರಲ್ಲಿ ಮತ್ತು ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-೬ಎ ರಲ್ಲಿ ಅವಕಾಶವಿದ್ದು, ಈ ಅವಕಾಶ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಅವರು ಕೋರಿದ್ದಾರೆ.

ತಾ. ೮ ರಿಂದ ಡಿಸೆಂಬರ್ ೧೨ ರವರೆಗೆ ಹತ್ತಿರದ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಅಥವಾ ಸಂಬAಧಪಟ್ಟ ತಾಲೂಕು ಕಚೇರಿಗಳಿಗೆ ನಿಗದಿತ ನಮೂನೆಯಲ್ಲಿ (ನಮೂನೆ-೬ ಸೇರ್ಪಡೆ, ನಮೂನೆ-೭ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-೮ ತಿದ್ದುಪಡಿಗಾಗಿ ಮತ್ತು ನಮೂನೆ-೮ಎ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ) ಸಲ್ಲಿಸಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ (ಗಿಔಖಿಇಖ ಊಇಐPಐIಓಇ ಂPP) ಅನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಮತದಾರರು, ನಾಗರಿಕರು ತಮ್ಮ ಮೊಬೈಲ್‌ನಲ್ಲಿ ಮತದಾರರ ಸಹಾಯವಾಣಿ ಆಪ್ (ಗಿಔಖಿಇಖ ಊಇಐPಐIಓಇ ಂPP) ಅನ್ನು ಡೌನ್‌ಲೋಡ್ ಮಾಡಿಕೊಂಡು ಮತದಾರರ ಸಹಾಯವಾಣಿ ಆಪ್ (ಗಿಔಖಿಇಖ ಊಇಐPಐIಓಇ ಂPP) ನಲ್ಲಿಯೂ ಹಾಗೂ ತಿತಿತಿ.ಟಿvsಠಿ. ಟಿiಛಿ.iಟಿ ವೆಬ್‌ಸೈಟ್ ಮೂಲಕ ಅನ್‌ಲೈನ್‌ನಲ್ಲಿ ನಮೂನೆ ೬, ೬ಎ, ೭, ೮ ಮತ್ತು ೮ ಅನ್ನು ಸಲ್ಲಿಸಬಹುದಾಗಿದೆ.