ಮಡಿಕೇರಿ, ನ. ೭: ವೀರಾಜಪೇಟೆ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಶ್ರೀ ಕಾವೇರಿ ಭಕ್ತಜನ ಸಂಘದ ವಾರ್ಷಿಕ ಮಹಾಸಭೆ ತಾ. ೧೦ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ. ಸಂಘದ ಅಧ್ಯಕ್ಷರಾದ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ಆಶ್ರಮದಲ್ಲಿ ಸಭೆ ನಡೆಯಲಿದೆ ಎಂದು ಕಾರ್ಯದರ್ಶಿ ಎನ್.ಯು. ಅಪ್ಪಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.