ಸಿದ್ದಾಪುರ, ನ. ೭: ಅರೆಕಾಡು ಗ್ರಾಮದ ಬಲಂಜಿಕೆರೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ಐದ್ರೋಡಮ್ಮ ದೇವಾಲಯದ ೧೨ನೇ ವರ್ಷದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಬೆಳಿಗ್ಗೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ದೂರದ ಊರುಗಳಿಂದಲೂ ಭಕ್ತಾದಿಗಳು ಆಗಮಿಸಿದ್ದರು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಹೊಸ್ಕೇರಿ ಗ್ರಾ.ಪಂ. ಅಧ್ಯಕ್ಷ ಬಿ.ವೈ ಪ್ರಭು ಶೇಖರ್ ಹಾಗೂ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಬಿ.ವೈ. ರಘು, ತಿರುಮಲರಾಜನ್ ಹಾಗೂ ಸದಸ್ಯರುಗಳು ಹಾಜರಿದ್ದರು.