ಮಡಿಕೇರಿ, ನ. ೬: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೧-೨೨ನೇ ಸಾಲಿನ ಆಯವ್ಯಯ ಘೋಷಣೆಯಂತೆ ಪರಿಶಿಷ್ಟಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ. ೪ ರಷ್ಟು ಬಡ್ಡಿ ಸಹಾಯಧನ ಯೋಜನೆಯನ್ನು ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ, ಡೀಲರ್ ಶಿಫ್, ಪ್ರಾಂಚೈಸಿ ಮತ್ತು ಹೊಟೇಲ್ ಉದ್ಯಮಗಳನ್ನು ಪ್ರಾರಂಭಿಸುವ ಸಲುವಾಗಿ ಈ ಯೋಜನೆಯಡಿ ಗರಿಷ್ಠ ರೂ. ೧ ಕೋಟಿಯವರೆಗೆ ರಾಷ್ಟಿçÃಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‌ಗಳಿAದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಅದರಂತೆ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಉದ್ಯಮಿಗಳು ಸ್ಥಳೀಯ ರಾಷ್ಟಿçÃಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‌ಗಳನ್ನು ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ: ೦೮೨೭೨ ೨೨೫೫೩೧ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.