ಗೋಣಿಕೊಪ್ಪಲು, ನ. ೮: ದಲಿತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ತಾ. ೧೪ ರಂದು ಗೋಣಿಕೊಪ್ಪಲುವಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ಜಿಲ್ಲಾ ಸಂಚಾಲಕ ರಾದ ಹೆಚ್. ಆರ್. ಪರಶುರಾಮ್ ತಿಳಿಸಿದ್ದಾರೆ.
ಗೋಣಿಕೊಪ್ಪಲುವಿನಲ್ಲಿ ಆಯೋಜನೆಗೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಗೋಣಿಕೊಪ್ಪಲು ವಿನ ಉಮಾಮಹೇಶ್ವರಿ ದೇವಸ್ಥಾನದಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಯವರೆಗೆ ಮೆರವಣಿಗೆ ಯಲ್ಲಿ ಸಾಗಿ ಸರ್ಕಾರದ ಗಮನ ಸೆಳೆಯಲಾಗು ವುದು ಹಾಗೂ ದಲಿತರು ಹಲವು ಸಮಯದಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಕೂಡಲೇ ಸರ್ಕಾರ ಸ್ಪಂದಿಸಬೇಕೆAದು ಒತ್ತಾಯಿಸಿ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು.
ಪ್ರತಿಭಟನೆಯ ನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ತಾಲೂಕಿನ ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗು ವುದು.
ಈ ಕಾರ್ಯಕ್ರಮಕ್ಕೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಗುರುಪ್ರಸಾದ್ ಕೆರೆಗೋಡು ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸ ಲಿದ್ದಾರೆ. ಜಿಲ್ಲೆಯ ಐದು ತಾಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮ ಗಳು ಹಂತ-ಹAತವಾಗಿ ನಡೆಯ ಲಿದ್ದು ಮೊದಲಿಗೆ ಪೊನ್ನಂಪೇಟೆ ತಾಲೂಕಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನAತರ ನಗರದ ಬಸ್ ನಿಲ್ದಾಣ ಸಮೀಪವಿರುವ ಪಂ.ಯ ಖಾಲಿ ನಿವೇಶನದಲ್ಲಿ ದಸಂಸ ಕಚೇರಿಯ ಕಟ್ಟಡಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಲಿ ದ್ದಾರೆಂದು ಪರಶುರಾಮ್ ತಿಳಿಸಿದರು.
ಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸತೀಶ್ ಸಿಂಗಿ, ಜಿಲ್ಲಾ ಖಚಾಂಚಿ ಕುಮಾರ್ ಮಹದೇವ್ ಉಪಸ್ಥಿತರಿದ್ದರು.