ಮಡಿಕೇರಿ, ನ.೭ : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಸಭೆ ಮತ್ತು ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮ ನಡೆಯಿತು.

ನಗರದ ಬಾಲಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಳುವೆರ ಜನಪದ ಕೂಟದ ಅಧ್ಯಕ್ಷ ಬಿ.ಬಿ. ಐತ್ತಪ್ಪ ರೈ ಜಿಲ್ಲೆಯಲ್ಲಿರುವ ಎಲ್ಲಾ ೧೩ ತುಳು ಭಾಷಿಕ ಸಮುದಾಯ ದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೂಟವನ್ನು ಬಲಿಷ್ಠಗೊಳಿಸಲಾಗು ತ್ತಿದ್ದು, ಎಲರೂ ಸಹಕಾರ ನೀಡಬೇಕೆಂದರು.

ಸನ್ಮಾನ: ಜನಪದ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಶೇಖರ್ ಭಂಡಾರಿ, ಉಪಾಧ್ಯಕ್ಷ ಕೆ.ಜಿ. ರಾಮಕೃಷ್ಣ ಹಾಗೂ ಮಡಿಕೇರಿ ನಗರ ತುಳುವೆರ ಜನಪದ ಕೂಟದ ನೂತನ ಅಧ್ಯಕ್ಷ ಅರುಣ್ ಶೆಟ್ಟಿ ಅವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮಡಿಕೇರಿ ನಗರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆಡಳಿತ ಮಂಡಳಿ ರಚಿಸಲಾಯಿತು. ಪ್ರತ್ಯೇಕವಾಗಿ ಮಹಿಳಾ ಸಮಿತಿಯನ್ನು ರಚಿಸಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಜಿಲ್ಲಾ ಉಪಾಧ್ಯಕ್ಷ ಬಿ.ವೈ. ಆನಂದರಘು, ಉಪಾಧ್ಯಕ್ಷೆ ಟಿ. ಜಯಲಕ್ಷಿö್ಮ ರವಿಶೆಟ್ಟಿ, ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಡಿ. ಸುರೇಶ್, ಗೌರವ ಅಧ್ಯಕ್ಷ ಶೇಖರ್ ಭಂಡಾರಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಜಿಲ್ಲಾ ಖಜಾಂಚಿ ಪ್ರಭುರೈ, ಜಿಲ್ಲಾ ಸಮಿತಿ ಸದಸ್ಯರುಗಳಾದ ಬಿ.ಕೆ. ಮೋಹನ್, ಲೀಲಾಶೇಷಮ್ಮ, ಸಂಘಟನಾ ಕಾರ್ಯದರ್ಶಿ ರಾಜೀವ್ ಲೋಚನ, ಮಡಿಕೇರಿ ತಾಲೂಕು ಸಂಚಾಲಕ ಪ್ರಸಾದ್ ಬಿಳಿಗೇರಿ, ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ್, ಶೋಭಾ ಮುತ್ತಪ್ಪ, ನಗರಸಭಾ ಸದಸ್ಯೆ ಚಿತ್ರಾವತಿ ಪೂವಪ್ಪ ಸೇರಿದಂತೆ ಜಿಲ್ಲಾ, ತಾಲೂಕು ಮತ್ತು ನಗರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಕೆ.ಪಿ. ಪುರುಷೋತ್ತಮ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ನಿರೂಪಿಸಿ ವಂದಿಸಿದರು.