ಮಡಿಕೇರಿ, ನ. ೮: ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆಯು ಮೂರ್ನಾಡು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಪಿ.ಕೆ. ಅಬೂಬಕ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಚಂದ್ರಶೇಖರ್, ಸದಸ್ಯ ಮೂಡೇರ ಅಶೋಕ್ ಅಯ್ಯಪ್ಪ, ಸಂಘದ ಉಪಾಧ್ಯಕ್ಷ ವಿನೋದ್, ಕಾರ್ಯದರ್ಶಿ ರಶಿಕ, ಖಜಾಂಚಿ ಅಬ್ದುಲ್ಲಾ, ನಿಯೋಜಿತ ಕಾರ್ಯದರ್ಶಿ ಶಶಿ ಎನ್.ಕೆ, ನಿರ್ದೇಶಕ ಖಾದರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೋವಿಡ್ ಸಮಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಪೊಲೀಸ್ ಮುಖ್ಯಪೇದೆ ರಾಜೇಶ್ ಹಾಗೂ ಸಿಬ್ಬಂದಿ ನಾಗೇಶ್, ಜಯಣ್ಣ ಅವರನ್ನು ಶಾಲು ಹೊದಿಸಿ ಫಲತಾಂಬೂಲ ನೀಡಿ ಸನ್ಮಾನಿಸಲಾಯಿತು.

ಸಭೆಯಲ್ಲಿ ಮುಂದಿನ ಸಾಲಿನ ಕಾರ್ಯಕಾರಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅನುಪದ ನಾಗರಾಜ್ ಪ್ರಾರ್ಥಿಸಿದರೆ, ನಿರ್ದೇಶಕ ಖಾದರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.