ಮಡಿಕೇರಿ, ನ. ೭: ಹಿಂದೂ ಮಲಯಾಳಿ ಸಮಾಜ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸಾಧಕರಿಗೆ ಸನ್ಮಾನ ಹಾಗೂ ಸಮಾಜದ ವಾರ್ಷಿಕ ಮಹಾಸಭೆ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು. ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್. ರಮೇಶ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಹಿAದೂ ಮಲಯಾಳಿ ಸಮಾಜದ ಗೌರವಾಧ್ಯಕ್ಷ ವಿ.ಎಂ. ವಿಜಯ, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಶಿವಾನಂದ್, ಎಸ್‌ಎನ್‌ಡಿಪಿ ಅಧ್ಯಕ್ಷ ವಿ.ಕೆ. ಲೋಕೇಶ್, ಹಿಂದೂ ಮಲಯಾಳಿ ಸಮಾಜದ ಮುಖ್ಯ ಸಲಹೆಗಾರರಾದ ಟಿ.ಕೆ. ಸುಧೀರ್, ಟಿ.ಆರ್. ವಾಸು ದೇವ್, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾದ ದಿವ್ಯಾ ಪಿ.ಕೆ. ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ, ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸಮುದಾಯದವರನ್ನು, ಕೊರೊನಾ ವೇಳೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸಿದ ಸಮುದಾಯದ ಕೊರೊನಾ ವಾರಿಯರ್ಸ್ಗಳನ್ನು, ಸ್ನಾತಕೋತ್ತರ ಪದವಿ ಪಡೆದವರನ್ನು ಗೌರವಿಸಲಾಯಿತು.