ಸೋಮವಾರಪೇಟೆ, ನ. ೧೦: ಜಿಲ್ಲೆಯಲ್ಲಿಯೇ ಪ್ರಥಮವಾಗಿ ಆರಂಭಗೊAಡ ಸೋಮವಾರಪೇಟೆ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ೨೫ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಬ್ಯಾಂಕ್‌ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. ೧೫ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಜಲಜಾ ಶೇಖರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಮಹದೇಶ್ವರ ಬಡಾವಣೆಯಲ್ಲಿ ಸುಮಾರು ರೂ. ೨೬ ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದು, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸೇರಿದಂತೆ ಕ್ಷೇತ್ರದ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಅನುದಾನ ಒದಗಿಸಿದ್ದಾರೆ ಎಂದರು.

ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಹಾಗೂ ಸಹಕಾರ ಕ್ಷೇತ್ರದಲ್ಲಿ ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ೧೯೯೭ ರಲ್ಲಿ ಕೇವಲ ೩ ಲಕ್ಷ ಷೇರು ಬಂಡವಾಳದೊAದಿಗೆ ಪ್ರಾರಂಭ ಗೊಂಡ ಸಂಸ್ಥೆ ಇಂದು ಲಾಭದ ಹಾದಿಯಲ್ಲಿ ಮುನ್ನಡೆದಿದ್ದು ೩ ಕೋಟಿ ವ್ಯವಹಾರ ಮಾಡುತ್ತಿದೆ ಎಂದು ಮಾಹಿತಿಯಿತ್ತರು. ತಾ. ೧೫ ರಂದು ಪೂರ್ವಾಹ್ನ ೧೧ ಗಂಟೆಗೆ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರು ಕಟ್ಟಡ ಉದ್ಘಾಟಿಸಲಿದ್ದು, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಮಾಜಿ ಅಧ್ಯಕ್ಷ ಬಿ.ಡಿ. ಮಂಜುನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಸೋಮವಾರಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಕೆ. ಮಾದಪ್ಪ, ಸಹಕಾರ ಸಂಘಗಳ ಉಪ ನಿಬಂಧಕರಾದ ಸಲೀಂ, ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷೆ ಜಯಂತಿ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ನಿರ್ದೇಶಕರು ಗಳಾದ ಲೋಕೇಶ್ವರಿ ಗೋಪಾಲ್, ಬೇಬಿ ಚಂದ್ರಹಾಸ್, ಉಮಾ ರುದ್ರಪ್ರಸಾದ್, ಕಾರ್ಯನಿರ್ವ ಹಣಾಧಿಕಾರಿ ಪೃಥ್ವಿ ಚಂದ್ರಶೇಖರ್ ಉಪಸ್ಥಿತರಿದ್ದರು.