ಚೆಟ್ಟಳ್ಳಿ, ನ. ೧೦: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದ ಉದ್ಘಾಟನೆ ತಾ. ೧೫ ರಂದು ಪೂರ್ವಾಹ್ನ ೧೧ ಗಂಟೆಗೆ ವೀರಾಜಪೇಟೆ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದ ಅಧ್ಯಕ್ಷ ಕೆ.ಪಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಸರಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ವೀರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರು ಗಳಾದ ಶಾಂತೆಯAಡ ವೀಣಾ ಅಚ್ಚಯ್ಯ ಹಾಗೂ ಸುನಿಲ್ ಸುಬ್ರಮಣಿ, ಪತ್ರಕರ್ತ ಹಾಗೂ ಅಂಕಣಕಾರ ಸಂತೋಷ್ ತಮ್ಮಯ್ಯ, ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘದ ರಾಜ್ಯಧ್ಯಕ್ಷ ಡಾ. ಶಿವಣ್ಣ, ಗೌರವ ಅಧ್ಯಕ್ಷ ಶ್ರೀನಿವಾಸ ಅವರು ಭಾಗವಹಿಸಲಿದ್ದಾರೆ. ಜಿಲ್ಲಾಧ್ಯಕ್ಷರುಗಳಾದ ಗೋಪಾಲ ದಕ್ಷಿಣ ಕನ್ನಡ, ನಿಂಗಪ್ಪ ಶಿಂಗೋಟಿ ಹುಬ್ಬಳ್ಳಿ-ದಾರವಾಡ, ದಿವಾಕರ್ ಮೈಸೂರು, ಮಲ್ಲರಾಜ ಮಂಡ್ಯ, ವೇಣು, ಬೆಂಗಳೂರು, ಮಂಜುನಾಥ್ ವಿಜಯನಗರ, ಬಸವಲಿಂಗಪ್ಪ ಗದಗ್, ಜಗನಾಥ್ ಕೋಲಾರ್, ಬಸ್ಸು ತಲ್ವಾರ್ ಬೆಳಗಾಂ, ಶುಭಾಷ್ ಚಂದ್ರ ಶಿವಮೊಗ್ಗ, ಮೇತ್ಯೂ ಕಡಬ ಘಟಕ ಭಾಗವಹಿಸಲಿದ್ದಾರೆಂದು ಸಂಘಟನಾ ಕಾರ್ಯದರ್ಶಿ ಕುಟ್ಟಂಡ ಲವಾ ತಿಳಿಸಿದ್ದಾರೆ.