ಕುಶಾಲನಗರ, ನ. ೯: ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.

ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಅಬ್ದುಲ್ ಮಜೀದ್ ಅವರು, ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ರೈತಾಪಿ ವರ್ಗಕ್ಕೆ ಭಾರೀ ನಷ್ಟ ಉಂಟಾಗಿದ್ದು, ಅವರ ಸಂಕಷ್ಟದ ಬಗ್ಗೆ ಸರ್ಕಾರ ಯಾವುದೇ ಚಿಂತನೆ ಹರಿಸಿಲ್ಲ ಎಂದು ಹೇಳಿದರು.

ಸ್ಥಳೀಯ ಆಡಳಿತ ಬಿಜೆಪಿ ಕೈಯಲ್ಲಿದ್ದು, ಬಡಜನತೆಯ ಬಗ್ಗೆ ಜನ ಪ್ರತಿನಿಧಿಗಳು ತಾತ್ಸಾರ ಮನೋಭಾವ ತಾಳುತ್ತಿದ್ದಾರೆ, ಇನ್ನೊಂದೆಡೆ ಕಾಡುಪ್ರಾಣಿಗಳ ಹಾವಳಿಯಿಂದ ಜನ ಜಾನುವಾರು ಗಳಿಗೆ ನಿರಂತರ ತೊಂದರೆ ಉಂಟಾಗಿದೆ. ಅರ್ಜಿ ಸಲ್ಲಿಸಿದ ಅರ್ಹ ಬಡ ಜನತೆಗೆ ಹಕ್ಕುಪತ್ರ ನೀಡುವಲ್ಲಿ ಕೂಡ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಷಯಕ್ಕೆ ಸಂಬAಧಿಸಿದAತೆ ಎಸ್‌ಡಿಪಿಐ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ

(ಮೊದಲ ಪುಟದಿಂದ) ಸಹಯೋಗದೊಂದಿಗೆ ನಿರಂತರ ಹೋರಾಟ ನಡೆಸಲಿದೆ ಎಂದÀÄ ಹೇಳಿದರು. ಇದೇ ಸಂದರ್ಭ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಎಸ್‌ಡಿಪಿಐ ಬಡ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ನಿರಂತರ (ಮೊದಲ ಪುಟದಿಂದ) ಸಹಯೋಗದೊಂದಿಗೆ ನಿರಂತರ ಹೋರಾಟ ನಡೆಸಲಿದೆ ಎಂದÀÄ ಹೇಳಿದರು. ಇದೇ ಸಂದರ್ಭ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಎಸ್‌ಡಿಪಿಐ ಬಡ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ನಿರಂತರ ಕುಶಾಲನಗರ ಕೊಪ್ಪ ಗಡಿಭಾಗದಲ್ಲಿ ಪಕ್ಷದ ಸ್ಥಳೀಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸ್ವಾಗತಿಸಿದರು.

ಈ ಸಂದರ್ಭ ಎಸ್‌ಡಿಪಿಐ ನಗರಾಧ್ಯಕ್ಷ ಭಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಫಿ, ಉಪಾಧ್ಯಕ್ಷ ಉಸ್ಮಾನ್ ಪ್ರಮುಖರಾದ ಅಫ್ಸರ್, ಭಯಾನ, ಜಕ್ರಿಯಾ ಮತ್ತಿತರರಿದ್ದರು.