ತಲಕಾವೇರಿ, ನ. ೧೦: ತಲಕಾವೇರಿ ಕ್ಷೇತ್ರದಿಂದ ಹಿಂತಿರುಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆ ನಿಲುಗಡೆಗೊಂಡಿದ್ದ ಕಾರೊಂದಕ್ಕೆ ಡಿಕ್ಕಿಯಾಗಿ ೨ ವಾಹನಗಳು ಭಾರೀ ಪ್ರಮಾಣದಲ್ಲಿ ಜಖಂಗೊAಡಿರುವ ಘಟನೆ ಬುಧವಾರ ಮಧ್ಯಾಹ್ನ ವೇಳೆಗೆ ನಡೆದಿದೆ. ಘಟನೆಯಲ್ಲಿ ತಲಕಾವೇರಿ ಕ್ಷೇತ್ರದ ಪ್ರಮುಖ ಗೇಟ್‌ಗೆ ಕೂಡ ಹಾನಿಯಾಗಿದ್ದು ಅದೃಷ್ಟವಶಾತ್ ಸ್ಥಳದಲ್ಲಿದ್ದ ಹಲವು ಭಕ್ತಾದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಲಕಾವೇರಿ ಕ್ಷೇತ್ರದಲ್ಲಿ ಭಕ್ತಾದಿಗಳನ್ನು ಬಿಟ್ಟು ಹಿಂತಿರುಗುತ್ತಿದ್ದ ಸಂದರ್ಭ ಚೆಟ್ಟಳ್ಳಿ ವ್ಯಾಪ್ತಿಯ ಕಾರೊಂದು (ಕೆಎ-೦೪-ಎಸಿ೨೮೫೫) ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ದೇವಾಲಯದ ಮುಖ್ಯ ಗೇಟ್‌ಗೆ ಡಿಕ್ಕಿಯಾಗಿ ನಂತರ ಎದುರು ಕ್ಷೇತ್ರದ ಕಡೆಗೆ ಆಗಮಿಸಲು ನಿಂತಿದ್ದ ವಿಜಾಪುರ ಕಡೆಯಿಂದ ಬಂದಿದ್ದ ಕಾರ್‌ಗೆ (ಕೆಎ೫೬ ೨೭೨೨) ಬಂದು ಅಪ್ಪಳಿಸಿದೆ.
(ಮೊದಲ ಪುಟದಿಂದ) ಅವಘಡದ ರಭಸಕ್ಕೆ ೨ ಕಾರುಗಳಿಗೆ ಭಾರೀ ಪ್ರಮಾಣದ ಹಾನಿಯುಂಟಾಗಿದೆ. ಈ ಸಂದರ್ಭ ಸ್ಥಳದಲ್ಲಿದ್ದ ಭಕ್ತಾದಿಗಳು ಚೆಲ್ಲಾಪಿಲ್ಲಿಯಾಗಿ ಓಡಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ೨ ಕಾರುಗಳಲ್ಲಿದ್ದ ಮೂವರು ವ್ಯಕ್ತಿಗಳಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ. ಸ್ಥಳಕ್ಕೆ ದೇವಾಲಯ ಆಡಳಿತ ಮಂಡಳಿಯ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿದ್ದು, ಘಟನೆ ಬಗ್ಗೆ ಭಾಗಮಂಡಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪಘಾತದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿದ್ದು, ತಲಕಾವೇರಿ ಕ್ಷೇತ್ರದ ಗೇಟ್‌ಗೂ ಹಾನಿ ಉಂಟಾಗಿದ್ದು ಈ ಬಗ್ಗೆ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
- ಚಂದ್ರಮೋಹನ್