ವೀರಾಜಪೇಟೆ, ನ. ೯: ಕೊಡಗಿನ ಐರಿ ಸಮುದಾಯದ ನಡುವೆ ನಡೆಯುವ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿಗೆ ಈ ಬಾರಿ ಕೆದಮುಳ್ಳೂರು ಗ್ರಾಮದ ಮುಲ್ಲೆöÊರೀರ ಕುಟುಂಬ ಆತಿಥ್ಯ ವಹಿಸಲಿದೆ.

ತಾ. ೧೩ ಮತ್ತು ೧೪ ರಂದು ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದೆ. ಪ್ರಾಕೃತಿಕ ವಿಕೋಪ ಮತ್ತು ಕೊರೊನಾ ಕಾರಣದಿಂದಾಗಿ ಈ ಪಂದ್ಯಾವಳಿ ಮೂರು ಬಾರಿ ಮುಂದೂಡಲ್ಪಟ್ಟಿತ್ತು. ಈ ಬಾರಿ ನವೆಂಬರ್‌ನಲ್ಲೇ ಪಂದ್ಯಾವಳಿ ಆಯೋಜಿಸಲಾಗುವುದು ಎಂದು ಮುಲ್ಲೆöÊರೀರ ಕಪ್ ಕ್ರಿಕೆಟ್ ಸಮಿತಿ ಅಧ್ಯಕ್ಷ ಮುಲ್ಲೆöÊರೀರ ಡಿ. ಗೋಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಾಂಪಿಯನ್ ತಂಡಕ್ಕೆ ರೂ. ೧೫ ಸಾವಿರ ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ ರೂ. ೧೦ ಸಾವಿರ ನಗದು ಮತ್ತು ಟ್ರೋಫಿ ಹಾಗೂ ತೃತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. ೩೦೦೦ ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭಾಗವಹಿಸಿದರೆ, ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಐರಿ ಸಮಾಜ ಅಧ್ಯಕ್ಷ ಮೇಲತ್ತಂಡ ರಮೇಶ್, ಉಪಾಧ್ಯಕ್ಷೆ ಬಬ್ಬೀರ ಸರಸ್ವತಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ೧೪ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.