ಮಡಿಕೇರಿ, ನ. ೯: ೨೦೧೫ ರ ನ. ೧೦ ರಂದು ಟಿಪ್ಪು ಜಯಂತಿ ಆಚರಣೆ ವೇಳೆ ನಡೆದಿದ್ದ ಗಲಭೆಯಲ್ಲಿ ಸಾವನ್ನಪ್ಪಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ದೇವಪಂಡ ಕುಟ್ಟಪ್ಪ ಅವರ ಸ್ಮರಣಾರ್ಥ ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ

ತಾ. ೧೦ ರಂದು (ಇಂದು) ನಗರದಲ್ಲಿ ಕುಟ್ಟಪ್ಪ ಸ್ಮರಣೆ ಹಾಗೂ ಜನಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಿಗಿ

ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಎಸ್ಪಿ ಕ್ಷಮಾ ಮಿಶ್ರಾ ನೇತೃತ್ವದಲ್ಲಿ ಪೊಲೀಸ್ ಪಡೆಯಿಂದ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪಥಸಂಚಲನ ನಡೆಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪೊಲೀಸ್ ಪಡೆ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಪ್ರಯತ್ನದೊಂದಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.