ಮಡಿಕೇರಿ, ನ. ೯: ಮುಳಿಯ ಜ್ಯುವೆಲ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ತಾ. ೧೦ ರಂದು (ಇಂದು) ಕನ್ನಡ-ಬದುಕು-ಬಂಗಾರ ಎಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೆ ೪.೩೦ಕ್ಕೆ ಮುಳಿಯ ಜ್ಯುವೆಲ್ಸ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕನ್ನಡ ಭಾವಗೀತಾಭಿನಯ ಗೆಹ್ಹಳಿಕೆಯ ಮಾನಸಿ ಸುಧೀರ್ ಅವರಿಂದ ವಿಶೇಷ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಭಾಗವಹಿಸುವರು.