ಮಡಿಕೇರಿ, ನ. ೯: ಹಿಂದೂಪರ ಸಂಘಟನೆಗಳು ತಾ. ೧೦ರಂದು (ಇಂದು)

ಆಯೋಜಿಸಿರುವ ಜನಜಾಗೃತಿ

ಸಭೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಂಡ ಪ್ರಕ್ರಿಯಾ ಸಂಹಿತೆ, ೧೯೭೩ರ

ಸೆಕ್ಷನ್ ೧೪೪, ೧೪೪(ಎ) ಮತ್ತು ಕರ್ನಾಟಕ ಪೊಲೀಸ್ ಆಕ್ಟ್, ೧೯೬೩ರ ಕಲಂ ೩೫ ರಡಿ ದತ್ತವಾದ ಅಧಿಕಾರದಂತೆ ತಾ. ೧೦ ರ ಬೆಳಿಗ್ಗೆ ೬ ಗಂಟೆಯಿAದ ಮಧ್ಯರಾತ್ರಿ ೧೨ ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹ ಪ್ರವೇಶ, ಸರ್ಕಾರಿ ಕಾರ್ಯಕ್ರಮ ಮುಂತಾದವುಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸಭೆ, ಸಮಾರಂಭ

(ಮೊದಲ ಪುಟದಿಂದ) ಮತ್ತು ಮೆರವಣಿಗೆಯನ್ನು ನಡೆಸಬಾರದು. ಎಲ್ಲಾ ಸಾರ್ವಜನಿಕ, ರಾಜಕೀಯ ಬಹಿರಂಗ ಸಭೆ-ಸಮಾರಂಭ, ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಸ್ತಾ-ರೋಕೋ ಹಾಗೂ ಮುತ್ತಿಗೆ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿüಸಿದೆ.

ವಿಜಯೋತ್ಸವ, ಪ್ರತಿಭಟನೆ ನಡೆಸುವುದು, ಪಟಾಕಿ ಸಿಡಿಸುವುದು, ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುವುದು, ಕಪ್ಪು ಬಣ್ಣದ ಅಥವಾ ಯಾವುದೇ ಪ್ರಚೋದನಾಕಾರಿ ಬಾವುಟ ಪ್ರದರ್ಶಿಸುವುದು, ಪ್ರಚೋದನಾತ್ಮಕ ಘೋಷಣೆ ಕೂಗುವುದು, ವಾಹನಗಳಲ್ಲಿ ಪ್ರಚೋದನಾತ್ಮಕ ಫಲಕ, ಬಾವುಟಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿದೆ.

ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿAಗ್ಸ್, ಕರಪತ್ರ, ಭಿತ್ತಿಪತ್ರ ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇದಿsತ ಅವಧಿಯಲ್ಲಿ ೫ ಜನರಿಗಿಂತ ಮೇಲ್ಪಟ್ಟು ಗುಂಪು ಸೇರಬಾರದು. ಸರ್ಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್, ಎ.ಟಿ.ಎಂ. ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳು ಆಯುಧಗಳನ್ನು ಹೊಂದಿರುವುದನ್ನು ಹೊರತುಪಡಿಸಿ, ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧ, ಮಾರಣಾಂತಿಕ ಹತ್ಯಾರುಗಳನ್ನು ಹೊಂದಿರುವುದು, ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.