೨ನೇ ಲಸಿಕೆ ಪಡೆದ ೬ ತಿಂಗಳ ನಂತರ ಬೂಸ್ಟರ್ ಡೋಸ್
ನವದೆಹಲಿ, ನ. ೧೦: ಕೋವಿಡ್-೧೯ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡ ಆರು ತಿಂಗಳ ನಂತರ ಬೂಸ್ಟರ್ ಡೋಸ್ ಪಡೆಯಲು ಸೂಕ್ತ ಸಮಯ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಅವರು ಹೇಳಿದ್ದಾರೆ. ಮೂಗಿನ ಲಸಿಕೆ ಹೊಂದುವ ಮಹತ್ವವನ್ನು ಒತ್ತಿ ಹೇಳಿದ ಕೃಷ್ಣ ಎಲ್ಲ ಅವರು, ಝಿಕಾ ವೈರಸ್ ಸೋಂಕಿಗೆ ಲಸಿಕೆ ಅಭಿವೃದ್ಧಿಪಡಿಸಿದ ವಿಶ್ವದ ಮೊದಲ ಕಂಪೆನಿ ತಮ್ಮದು ಎಂದಿದ್ದಾರೆ. ಟೈಮ್ಸ್ ನೌ ಸಮಿಟ್ ೨೦೨೧ ರಲ್ಲಿ ಮಾತನಾಡಿದ ಕೃಷ್ಣ ಎಲ್ಲ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶಿಯ ಕೋವಾಕ್ಸಿನ್ ಲಸಿಕೆಯನ್ನು ಪಡೆದುಕೊಂಡಿರುವುದು ಭಾರತೀಯ ವಿಜ್ಞಾನದ ಮೇಲೆ ವಿಶ್ವಾಸವನ್ನು ತೋರಿಸಿದೆ ಎಂದು ಅವರು ಹೇಳಿದ್ದಾರೆ. ವಿಶ್ವದಾದ್ಯಂತ ನೇಸಲ್ ಲಸಿಕೆ ಬಗ್ಗೆ ಗಮನಹರಿಸಲಾಗುತ್ತಿದೆ. ಸೋಂಕು ಹರಡುವಿಕೆ ತಡೆಗೆ ಅದೊಂದೇ ಸೂಕ್ತ ಮಾರ್ಗವಾಗಿದ್ದು, ಭಾರತ್ ಬಯೋಟೆಕ್ ಸಹ ನೇಸಲ್ ಲಸಿಕೆ ತಯಾರಿಕೆಗೆ ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ‘ನಾವು ನೇಸಲ್ ಕೋವಿಡ್ ಲಸಿಕೆಯನ್ನು ಬಿಡುಗಡೆ ಮಾಡಲಿದ್ದು, ಮೊದಲ ಡೋಸ್ ಆಗಿ ಕೋವ್ಯಾಕ್ಸಿನ್ ಲಸಿಕೆ ಮತ್ತು ಎರಡನೇ ಡೋಸ್ ಆಗಿ ನೇಸಲ್ ಲಸಿಕೆ ನೀಡಲು ಚಿಂತಿಸುತ್ತಿದ್ದೇವೆ. ನೇಸಲ್ ಲಸಿಕೆಯು ವೈಜ್ಞಾನಿಕವಾಗಿ ಅತ್ಯಂತ ಮುಖ್ಯವಾದುದ್ದಾಗಿದ್ದು, ಅದರಿಂದ ಸೋಂಕಿನ ಹರಡುವಿಕೆ ತಡೆಯಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಪರಮ್ ಬೀರ್ ಸಿಂಗ್ ವಿರುದ್ಧ ೩ನೇ ಬಾರಿ ಜಾಮೀನು ರಹಿತ ವಾರಂಟ್
ಮುAಬೈ, ನ. ೧೦: ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬAಧಿಸಿದAತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ವಿರುದ್ಧ ಮುಂಬೈ ಕೋರ್ಟ್ ಬುಧವಾರ ಮತ್ತೊಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ. ಇದು ತಲೆಮರೆಸಿಕೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ವಿರುದ್ಧ ಜಾರಿಗೊಳಿಸುತ್ತಿರುವ ಮೂರನೇ ಬಂಧನ ವಾರಂಟ್ ಆಗಿದೆ. ಇದೇ ಪ್ರಕರಣ ಸಂಬAಧ ಬಂಧನಕ್ಕೊಳಗಾಗಿರುವ ಇತರ ಇಬ್ಬರು ಆರೋಪಿ ಪೊಲೀಸ್ ಅಧಿಕಾರಿಗಳನ್ನು ಮುಂಬೈ ಕೋರ್ಟ್ ಮಂಗಳವಾರ ಏಳು ದಿನಗಳ ಕಾಲ ಮಹಾರಾಷ್ಟç ಸಿಐಡಿ ವಶಕ್ಕೆ ನೀಡಿದೆ. ಈ ಹಿಂದೆ ಮುಂಬೈ ಕ್ರೆöÊಂ ಬ್ರಾಂಚ್‌ನಲ್ಲಿ ನಿಯೋಜನೆಗೊಂಡಿದ್ದ ಇನ್ಸ್ಪೆಕ್ಟರ್ ಗಳಾದ ನಂದಕುಮಾರ್ ಗೋಪಾಲೆ ಮತ್ತು ಆಶಾ ಕೊರ್ಕೆ ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಿಐಡಿ ಸೋಮವಾರ ಬಂಧಿಸಿತ್ತು. ಮಹಾರಾಷ್ಟç ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ೧೦೦ ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬAಧ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟç ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು. ಈ ಸಂಬAಧ ಜುಲೈ ೨೩ ರಂದು ಪರಮ್ ಬೀರ್ ಸಿಂಗ್, ಸಚಿನ್ ವಾಜೆ ಮತ್ತು ಇತರರ ವಿರುದ್ಧ ಗೋರೆಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂಬೈ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.
ರಾಜಸ್ಥಾನದಲ್ಲಿ ಭೀಕರ ಅಪಘಾತ: ೧೨ ಮಂದಿ ಸಜೀವ ದಹನ
ಬಾರ್ಮರ್, ನ. ೧೦: ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸುಮಾರು ೧೨ ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್-ಜೋಧ್‌ಪುರ ಹೆದ್ದಾರಿಯಲ್ಲಿ ನಡೆದಿದೆ. ಟ್ಯಾಂಕರ್ ಹಾಗೂ ಬಸ್ ಮಧ್ಯೆ ಅಪಘಾತ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಅಲ್ಲದೆ, ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ೧೨ ಮಂದಿ ಸಜೀವ ದಹನವಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಅವಘಡ ಸಂಭವಿಸಿದಾಗ ಬಸ್‌ನಲ್ಲಿ ೨೫ ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಡಿಕ್ಕಿಯ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಕೆಲವರು ಕಿಟಕಿ ಗ್ಲಾಸನ್ನು ಒಡೆದು ಹಾಕಿ ಹೊರಗೆ ಬಂದು ಬಚಾವ್ ಆಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ೧೦ ಜನರನ್ನು ರಕ್ಷಣೆ ಮಾಡಿದ್ದಾರೆ. ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವಿನ ಅಪಘಾತದಲ್ಲಿ ೧೨ ಮಂದಿ ಮೃತಪಟ್ಟಿದ್ದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. ಬಾರ್ಮರ್ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಭಾರತ ಆಹ್ವಾನ ತಿರಸ್ಕರಿಸಿ ಪಾಕ್-ಚೀನಾ ಸಭೆಗೆ ಗೈರು
ನವದೆಹಲಿ, ನ. ೧೦: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ಕೈವಶ ಮಾಡಿಕೊಂಡ ಮೇಲೆ ಸದ್ಯದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ೮ ರಾಷ್ಟçಗಳನ್ನೊಳಗೊಂಡ ಭದ್ರತಾ ಸಲಹೆಗಾರರ ಸಭೆ ದೆಹಲಿಯಲ್ಲಿ ನಡೆಯುತ್ತಿದೆ. ಭಯೋತ್ಪಾದನೆ, ಮಹಿಳೆಯರ ಮೇಲಿನ ಹಲ್ಲೆ, ಹಿಂಸಾಚಾರ ಸೇರಿದಂತೆ ಅನೇಕ ವಿಚಾರಗಳ ಕುರಿತಂತೆ ಚರ್ಚಿಸಲಾಗುತ್ತಿದೆ. ಸುಸ್ಥಿರ ಸರ್ಕಾರ ಹಾಗೂ ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲಸುವ ದೃಷ್ಟಿಯಿಂದ ದೆಹಲಿ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಇರಾನ್, ರಷ್ಯಾ, ಮಧ್ಯ ಏಷ್ಯಾದ ದೇಶಗಳಾದ ತಜಕಿಸ್ತಾನ್, ಕಿರ್ಗಿಸ್ತಾನ್, ಕಜಕಿಸ್ತಾನ್, ಉಜ್ಬೇಕಿಸ್ತಾನ್ ಮತ್ತು ತುರ್ಕಿಮೆನಿಸ್ತಾನ್ ಸಹ ಈ ಸಭೆಯಲ್ಲಿ ಪಾಲ್ಗೊಂಡಿವೆ. ಸಭೆಯಲ್ಲಿ, ಎಲ್ಲಾ ದೇಶಗಳು ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಆ ರಾಷ್ಟçದಲ್ಲಿನ ಭಯೋತ್ಪಾದನೆ ಮತ್ತು ಮಾದಕ ವಸ್ತುಗಳ ಕಳ್ಳಸಾಗಣೆಯನ್ನು ಅಲ್ಲಿಂದ ನಿಲ್ಲಿಸಬೇಕು ಅನ್ನೋ ಬಗ್ಗೆ ಗಡಿ ಹಂಚಿಕೊAಡಿರುವ ರಾಷ್ಟçಗಳ ಒತ್ತಾಯವಾಗಿದೆ. ಭಾರತದ ರಾಷ್ಟಿçÃಯ ಭದ್ರತಾ ಸಲಹೆಗಾರ ಆಗಿರುವ ಅಜಿತ್ ಧೋವಲ್ ಅಧ್ಯಕ್ಷತೆಯಲ್ಲಿ ಈ ಮಹತ್ವದ ಚರ್ಚೆ ನಡೆಯುತ್ತಿವೆ. ಈ ಸಭೆಯಲ್ಲಿ ಭಾಗವಹಿಸುವಂತೆ ಪಾಕಿಸ್ತಾನಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ, ಪಾಕಿಸ್ತಾನದ ಭದ್ರತಾ ಸಲಹೆ ಗಾರರಾಗಿರುವ ಮೋಯಿದ್ ಯೂಸುಫ್ ದೆಹಲಿ ಭೇಟಿ ತಿರಸ್ಕರಿಸಿದ್ದರು. ಪಾಕ್‌ನ ವಿಶೇಷ ಸ್ನೇಹಿತನಾಗಿರುವ ಚೀನಾ ಕೂಡ ವೇಳಾಪಟ್ಟಿಯ ನೆಪದಲ್ಲಿ ಸಭೆಗೆ ಬರಲು ನಿರಾಕರಿಸಿದೆ.