ಸೋಮವಾರಪೇಟೆ, ನ.೧೦: ಕಳೆದ ೨೦೧೫ರ ನವೆಂಬರ್ ೧೦ರಂದು ಮಡಿಕೇರಿಯಲ್ಲಿ ನಡೆದ ಟಿಪ್ಪು ಜಯಂತಿ ಸಂದರ್ಭದ ಗಲಭೆಯಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್‌ನ ಪ್ರಧಾನ ಕಾರ್ಯದರ್ಶಿ, ಮಾದಾಪುರ ಸಮೀಪದ ಇಗ್ಗೋಡ್ಲು ನಿವಾಸಿ ದೇವಪಂಡ ಕುಟ್ಟಪ್ಪ ಅವರ ಸ್ಮರಣೆ-ಶ್ರದ್ಧಾಂಜಲಿ ಕಾರ್ಯಕ್ರಮ ಪೊಲೀಸರೊಂದಿಗಿನ ತಿಕ್ಕಾಟದ ನಡುವೆಯೂ ಮಾದಾಪುರದಲ್ಲಿ ಜರುಗಿತು.
ಮಾದಾಪುರದ ಗಣಪತಿ ದೇವಾಲಯದಲ್ಲಿ ಬೆಳಿಗ್ಗೆ ೯.೩೦ಕ್ಕೆ ಕುಟ್ಟಪ್ಪ ಅವರ ಕುಟುಂಬಸ್ಥರ ಸಮ್ಮುಖದಲ್ಲಿ, ಸ್ಥಳೀಯ ಹಿಂದೂಪರ ಕಾರ್ಯಕರ್ತರ ಉಪಸ್ಥಿತಿಯಲ್ಲಿ ವಿಶೇಷ ಪೂಜೆ ನೆರವೇರಿತು. ಕುಟ್ಟಪ್ಪ ಅವರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸೋಮವಾರಪೇಟೆ, ನ.೧೦: ಕಳೆದ ೨೦೧೫ರ ನವೆಂಬರ್ ೧೦ರಂದು ಮಡಿಕೇರಿಯಲ್ಲಿ ನಡೆದ ಟಿಪ್ಪು ಜಯಂತಿ ಸಂದರ್ಭದ ಗಲಭೆಯಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್‌ನ ಪ್ರಧಾನ ಕಾರ್ಯದರ್ಶಿ, ಮಾದಾಪುರ ಸಮೀಪದ ಇಗ್ಗೋಡ್ಲು ನಿವಾಸಿ ದೇವಪಂಡ ಕುಟ್ಟಪ್ಪ ಅವರ ಸ್ಮರಣೆ-ಶ್ರದ್ಧಾಂಜಲಿ ಕಾರ್ಯಕ್ರಮ ಪೊಲೀಸರೊಂದಿಗಿನ ತಿಕ್ಕಾಟದ ನಡುವೆಯೂ ಮಾದಾಪುರದಲ್ಲಿ ಜರುಗಿತು.
ಮಾದಾಪುರದ ಗಣಪತಿ ದೇವಾಲಯದಲ್ಲಿ ಬೆಳಿಗ್ಗೆ ೯.೩೦ಕ್ಕೆ ಕುಟ್ಟಪ್ಪ ಅವರ ಕುಟುಂಬಸ್ಥರ ಸಮ್ಮುಖದಲ್ಲಿ, ಸ್ಥಳೀಯ ಹಿಂದೂಪರ ಕಾರ್ಯಕರ್ತರ ಉಪಸ್ಥಿತಿಯಲ್ಲಿ ವಿಶೇಷ ಪೂಜೆ ನೆರವೇರಿತು. ಕುಟ್ಟಪ್ಪ ಅವರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಂಘಟನೆಗಳ ಕಾರ್ಯಕರ್ತರು ಆಗಮಿಸುತ್ತಿದ್ದಂತೆ, ಪೊಲೀಸರು ೧೪೪ ಸೆಕ್ಷನ್ ಅಡಿಯಲ್ಲಿ ಕ್ರಮಕ್ಕೆ ಮುಂದಾದರು.
(ಮೊದಲ ಪುಟದಿಂದ) ಯಾವುದೇ ಕಾರಣಕ್ಕೂ ಸಭೆ-ಮೆರವಣಿಗೆ ನಡೆಸದಂತೆ ಸಂಘಟಕರಿಗೆ ಸೂಚಿಸಿದರು. ಈ ಸಂದರ್ಭ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಹಿಂದೂ ಸಮಾಜದ ಕಾರ್ಯಕರ್ತರು ಕಳೆದ ೫ ವರ್ಷಗಳಿಂದಲೂ ಶಾಂತಿಯುತ ವಾಗಿ ಕಾರ್ಯಕ್ರಮ ಆಯೋಜಿಸಿ ಕೊಂಡು ಬರುತ್ತಿದ್ದರೂ ಸಹ ಪೊಲೀಸರು ಹಾಗೂ ಜಿಲ್ಲಾಡಳಿತ ಅನಗತ್ಯವಾಗಿ ತಡೆ ಯೊಡ್ಡುತ್ತಿದೆ ಎಂದು ಕಾರ್ಯಕರ್ತರು ಅಸಮಾ ಧಾನ ವ್ಯಕ್ತಪಡಿಸಿದರು.
ಬೆಳಿಗ್ಗೆ ೯.೩೦ಕ್ಕೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ, ೧೦ ಗಂಟೆಗೆ ಶ್ರದ್ಧಾಂಜಲಿ ಸಭೆ ಆಯೋಜಿಸಿದ್ದು, ಬಹುತೇಕ ಕಾರ್ಯಕರ್ತರು ಮಾದಾಪುರದಲ್ಲಿ ಜಮಾವಣೆಗೊಂಡಿದ್ದರು. ಈ ನಡುವೆ ಮಡಿಕೇರಿಯಲ್ಲಿ ಆಯೋಜನೆ ಗೊಂಡಿದ್ದ ಜನಜಾಗೃತಿ ಸಭೆಗೆ ಪ್ರಮುಖ ಭಾಷಣಕಾರರಾಗಿ ನಿಯೋಜಿಸಲ್ಪಟ್ಟಿದ್ದ ಉಡುಪಿ ಜಿಲ್ಲಾ ಹಿಂದೂ ಜಾಗರಣಾ ವೇದಿಕೆಯ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಹಾಗೂ ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ ಅವರುಗಳಿಗೆ ಬೆಳಿಗ್ಗೆ ೮.೩೦ರ ಸುಮಾರಿಗೆ ಕೊಡಗಿನ ಗಡಿ ತೋಳೂರುಶೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಎಡದಂಟೆ ಗ್ರಾಮದಲ್ಲಿ ಸೋಮವಾರಪೇಟೆ ಪೊಲೀಸರು ತಡೆಯೊಡ್ಡಿದರು.
ಈ ಸಂದರ್ಭ ಶ್ರೀಕಾಂತ್ ಶೆಟ್ಟಿ, ಪ್ರಕಾಶ್ ಅವರುಗಳು ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿ, ತಾವುಗಳು ಕಾರ್ಯಕ್ರಮಕ್ಕೆ ತೆರಳುತ್ತಿದ್ದು, ಅನಗತ್ಯವಾಗಿ ತಡೆಯೊಡ್ಡುತ್ತಿದ್ದೀರಾ ಎಂದು ಆಕ್ಷೇಪಿಸಿದರು. ಕೊಡಗಿನಲ್ಲಿ ೧೪೪ ಸೆಕ್ಷನ್ ಜಾರಿಯಲ್ಲಿದ್ದು, ಯಾವುದೇ ಕಾರಣಕ್ಕೂ ಕಾರ್ಯಕ್ರಮಕ್ಕೆ ಅವಕಾಶವಿಲ್ಲ; ತಾವುಗಳು ವಾಪಸ್ ಹೋಗಬೇಕೆಂದು ಪೊಲೀಸರು ನಿರ್ದೇಶನ ನೀಡಿದರು.
ಅತಿಥಿಗಳಿಗೆ ಪೊಲೀಸರು ತಡೆಯೊಡ್ಡಿರುವ ಬಗ್ಗೆ ಮಾಹಿತಿ ಪಡೆದ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸುಭಾಷ್ ತಿಮ್ಮಯ್ಯ, ಜಿಲ್ಲಾ ಸಹ ಸಂಪರ್ಕ ಪ್ರಮುಖ್ ಎಂ.ಬಿ. ಉಮೇಶ್, ಪ್ರಮುಖರಾದ ರವಿಕುಶಾಲಪ್ಪ, ಮಹೇಶ್ ತಿಮ್ಮಯ್ಯ, ಹೆಚ್.ಕೆ. ಮಾದಪ್ಪ, ಕೂತಿ ಪರಮೇಶ್ ಸೇರಿದಂತೆ ಇತರರು ಸ್ಥಳಕ್ಕೆ ತೆರಳಿ ಪೊಲೀಸರ ಕ್ರಮವನ್ನು ಖಂಡಿಸಿದರು. ಮಾದಾಪುರದಲ್ಲಿ ಆಯೋಜನೆ ಗೊಂಡಿರುವ ಶ್ರದ್ಧಾಂಜಲಿ ಕಾರ್ಯ ಕ್ರಮಕ್ಕೆ ಆಗಮಿಸುತ್ತಿದ್ದು, ನೀವುಗಳು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿ ದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಪೊಲೀಸರು ಹಾಗೂ ಜಾಗರಣಾ ವೇದಿಕೆಯ ಪ್ರಮುಖರ ನಡುವೆ ಮಾತಿನ ಚಕಮಕಿ ನಡೆಯಿತು.
ಅಂತಿಮವಾಗಿ ಮಾದಾಪುರದ ಗಣಪತಿ ದೇವಾಲಯದಲ್ಲಿ ಆಯೋಜನೆಗೊಂಡಿದ್ದ ಪೂಜೆಗೆ ತೆರಳಲು ಪೊಲೀಸರು ಅನುವು ಮಾಡಿಕೊಟ್ಟರು. ಶ್ರೀಕಾಂತ್ ಶೆಟ್ಟಿ ಹಾಗೂ ಪ್ರಕಾಶ್ ಕುಕ್ಕೆಹಳ್ಳಿ ಅವರು ಮಾದಾಪುರಕ್ಕೆ ಆಗಮಿಸುತ್ತಿದ್ದಂತೆ ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಶ್ರೀಧರ್ ಸೇರಿದಂತೆ ಸಿಬ್ಬಂದಿಗಳು ಮತ್ತೆ ತಡೆಯೊಡ್ಡಿದರು.
ಈ ಸಂದರ್ಭ ಮಾದಾಪುರ ಪಟ್ಟಣದಲ್ಲಿ ಮತ್ತೊಮ್ಮೆ ಗೊಂದಲ ಸೃಷ್ಟಿಯಾಯಿತು. ವಾಹನಗಳನ್ನು ರಸ್ತೆ ಮಧ್ಯೆಯೇ ತಡೆದಿದ್ದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಲಾಯಿತು. ಪೂಜಾ ಕಾರ್ಯಕ್ಕೆ ತೆರಳಲು ಅನುವು ಮಾಡಿಕೊಡುವಂತೆ ಸಚಿವರು ಪೊಲೀಸರಿಗೆ ಮೌಖಿಕವಾಗಿ ಸೂಚಿಸಿದರು.
ನಂತರ ಪೊಲೀಸರು ೧೪೪ ಸೆಕ್ಷನ್ ಉಲ್ಲಂಘನೆಯಾಗದAತೆ, ಒಮ್ಮೆಗೆ ನಾಲ್ವರು ಕಾರ್ಯಕರ್ತರಂತೆ ತೆರಳಿ ಪೂಜೆ ಸಲ್ಲಿಸಲು ಅನುವು ಮಾಡಿಕೊಟ್ಟರು. ಅತಿಥಿಗಳು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಆದರು. ಕಾರ್ಯಕ್ರಮದ ವೇದಿಕೆಯಲ್ಲಿ ಕುಟ್ಟಪ್ಪ ಅವರ ಪುತ್ರ ಡಿ.ಕೆ. ಡಾಲಿ, ಹಿಂದೂ ಜಾಗರಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಾದಾ ಪುರ ಸುನಿಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿಂದೂ ಜಾಗರಣಾ ವೇದಿಕೆಯ ಸುಭಾಷ್, ಎಂ.ಬಿ. ಉಮೇಶ್, ಪ್ರಚಾರ ಪ್ರಮುಖ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬೋಜೇಗೌಡ, ಕಾರ್ಯದರ್ಶಿ ಮಾದಾಪುರ ವಿನು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.