ಮಡಿಕೇರಿ, ನ. ೧೦: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಅರಿವು (ಸಿ.ಇ.ಟಿ-ನೀಟ್) ವಿದ್ಯಾಭ್ಯಾಸ ಸಾಲವನ್ನು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ತಾಂತ್ರಿಕ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಸಿ.ಇ.ಟಿ-ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿAಗ್/ ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸಿ, ಸಾಲಕ್ಕೆ ಶೇ.೨ ರಂತೆ ಸೇವಾ ಶುಲ್ಕ ಪಡೆಯಲಾಗುವುದು. ಅರ್ಜಿದಾರರ ವಾರ್ಷಿಕ ಆದಾಯ ೮ ಲಕ್ಷ ರೂ.ಗಳ ಒಳಗಿರಬೇಕು. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮುಖೇನ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ನಿಗಮದ ವೆಬ್ಸೈಟ್ hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಕಚೇರಿ ದೂರವಾಣಿ: ೦೮೨೭೨-೨೨೦೪೪೯, ಅರಿವು (ಸಿ.ಇ.ಟಿ-ನೀಟ್) ಸಾಲ ಯೋಜನೆಗೆ ಆನ್ಲೈನ್ನಲ್ಲಿ ಭರ್ತಿ ಮಾಡಿದ ಅರ್ಜಿ, ವಿದ್ಯಾರ್ಥಿಯ ೪ ಭಾವಚಿತ್ರ ಹಾಗೂ ಪೋಷಕರ ೨+೨ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಸಿ.ಇ.ಟಿ-ನೀಟ್ ಪ್ರವೇಶ ಪತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿ, ಡಿಪ್ಲೋಮಾ/ ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ನೋಟರಿ ಮೂಲಕ ರೂ. ೫೦ ಬಾಂಡ್ ಕಾಗದದಲ್ಲಿ ನೋಟರಿ ಅವರಿಂದ ದೃಢೀಕರಿಸಿ ಸಲ್ಲಿಸಬೇಕು. ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ ಹಾಗೂ ಪೋಷಕರ ಸ್ವಯಂ ಘೋಷನೆ ಪತ್ರ ಸಲ್ಲಿಸಬೇಕು.
ಈ ಯೋಜನೆಯ ಲಾಭ ಪಡೆಯಲು ಆನ್ಲೈನ್ನ ಮುಖೇನ ವಿದ್ಯಾರ್ಥಿಗಳು ಮಾಹಿತಿ ಭರ್ತಿಮಾಡಿ, ಸಾಪ್ಟ್ ಕಾಫಿಯನ್ನು ಎರಡು ಪ್ರತಿಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ಈ ವಿಳಾಸಕ್ಕೆ ಪ್ರಿಂಟೌಟ್ ಪಡೆದ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ. ಅರ್ಜಿಯನ್ನು ಸಲ್ಲಿಸಲು ಕೆಇಎ ಕೌನ್ಸೆಲಿಂಗ್ ಮುಗಿದ ನಂತರ ಕೊನೆಯ ದಿನಾಂಕವೆAದು ನಿಗದಿಪಡಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ. ೦೮೨೭೨-೨೨೦೪೪೯, ೮೯೭೧೨೮೨೯೩೨ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.