ಮಡಿಕೇರಿ, ನ. ೧೦: ಮೈಸೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-೨ ವೃಂದದ ೨೦೨೧ ರ ಜನವರಿ ೧ ರಲ್ಲಿದ್ದಂತೆ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ.

ಈ ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಬಾದಿತ ಶಿಕ್ಷಕರು ತಾ. ೧೮ ರ ಕಚೇರಿ ಅವಧಿಯೊಳಗೆ ಅಂತರ್ ಜಾಲದಲ್ಲಿ ಪ್ರಕಟಿಸಲಾದ ಪಟ್ಟಿಯಲ್ಲಿ ಹೆಸರು ಇರುವ ಮುದ್ರಿತ ಪ್ರತಿಯೊಂದಿಗೆ ಸಮರ್ಥನೀಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮುಖ್ಯ ಶಿಕ್ಷಕರ ದೃಢೀಕರಣದೊಂದಿಗೆ ಉಪ ನಿರ್ದೇಶಕರು (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ ರವರಿಗೆ ತಲುಪುವಂತೆ ಕಳುಹಿಸಲು ತಿಳಿಸಿದೆ. ನಂತರ ಬಂದAತಹ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರು ತಿಳಿಸಿದ್ದಾರೆ.