ವೀರಾಜಪೇಟೆ, ನ ೧೨: ವೀರಾಜಪೇಟೆ ವಿಭಾಗದ, ವೀರಾಜಪೇಟೆ ಅರಣ್ಯ ವಲಯದ ಅಮ್ಮತ್ತಿ ಶಾಖೆಯ ವ್ಯಾಪ್ತಿಯ ಗ್ರಾಮಗಳಾದ ಹೊಸೂರು, ಬೆಟ್ಟಗೇರಿ, ಪುಲಿಯೇರಿ, ಅಮ್ಮತ್ತಿ, ಕಾರ್ಮಾಡು ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ತಾ. ೧೩ರಂದು (ಇಂದು) ಹಮ್ಮಿಕೊಂಡಿದ್ದು, ತೋಟದ ಕಾರ್ಮಿಕರು ತಮ್ಮ ಕೆಲಸ - ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕೆಂದು ವಲಯ ಅರಣ್ಯ ಅಧಿಕಾರಿಗಳಾದ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.