ಮೈಸೂರು, ನ. ೧೨: ದಿನೇ ದಿನೇ ಏರುತ್ತಿರುವ ಉತ್ಪಾದನಾ ವೆಚ್ಚ, ಪ್ರತಿಕೂಲ ಹವಾಮಾನ, ಕೋವಿಡ್ ಲಾಕ್‌ಡೌನ್ ಹಾಗೂ ದರ ಕುಸಿತದ ಕಾರಣದಿಂದ ಕಾಫಿ ಬೆಳೆಗಾರರು ಇಂದು ಸಂಕಷ್ಟದಲ್ಲಿದ್ದಾರೆ. ಕೊಡಗಿನಲ್ಲಿ ವನ್ಯಜೀವಿ ಹಾವಳಿ ಕೂಡ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಇದೀಗ ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾಲಯದ (ಅಈಖಿಖI) ವಿಜ್ಞಾನಿಯೊಬ್ಬರು ಕಾಫಿ ಬೆಳೆಗಾರರು ತಮ್ಮ ತೋಟಗಳಿಂದ ಹೆಚ್ಚಿನ ಆದಾಯ ಗಳಿಸುವ ಸಂಶೋಧನೆಯೊAದನ್ನು ಮಾಡಿ ಯಶಸ್ವಿಯಾಗಿದ್ದರೆ ಇದು ಬೆಳೆಗಾರ ಪರಿಸ್ಥಿತಿ ಸುಧಾರಣೆ ಮಾಡುವ ನಿರೀಕ್ಷೆ ಹುಟ್ಟಿಸಿದೆ. ಜೊತೆಗೆ ಸಂಶೋಧನೆ ರೈತರ ಆದಾಯ ಹೆಚ್ಚಳ ಮಾಡಲು ಸಹಕಾರಿಯಾಗಿದೆ.

ಕಾಫಿ ಎಲೆಗಳಿಂದಲೂ ಪಾನೀಯ ತಯಾರು ಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿರುವ ಮೈಸೂರು ಸಂಶೋಧನಾಲಯದ ಪ್ರಧಾನ ವಿಜ್ಞಾನಿ ಪುಷ್ಪಾ ಎಸ್. ಮೂರ್ತಿ ಅವರು ಇದರಿಂದ ಮನುಷ್ಯನ ಆರೋಗ್ಯಕ್ಕೂ ಉಪಯುಕ್ತವಾಗಲಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕಾಫಿ ಎಲೆಗಳಿಂದ ಪಾನೀಯ ತಯಾರು ಮಾಡುವುದರಿಂದ ಬೆಳೆಗಾರರಿಗೆ ವರ್ಷವಿಡೀ ಆದಾಯ ಲಭಿಸಲಿದೆ. ೨೦೧೯ ರಿಂದಲೇ ತಾವು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತಿದ್ದು ಇದಕ್ಕೆ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದಿಂದ ಅನುದಾನವನ್ನು ಪಡೆದುಕೊಳ್ಳಲಾಗಿದೆ ಎಂದರು.

ಕಾಫಿ ಬೀಜದ ಬೆಳವಣಿಗೆಗೆ ಅಡ್ಡಿಯಾಗದಂತೆ ರೈತರು ಹಿಂಗಾರು ಹಂಗಾಮಿನ ಸಮಯದಲ್ಲಿ ಬಲಿತ ಕಾಫಿ ಎಲೆಗಳನ್ನು ಬಳಸಿದರೆ, ಅದು ಕಾಫಿ ಬೆಳೆಗಾರರ ಆರ್ಥಿಕ ಅಭಿವೃದ್ಧಿಯ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಇಂದು ಕಾಫಿ ಉದ್ಯಮದ ಸುಮಾರು ೭೦ ಪ್ರತಿಶತದಷ್ಟು ಜನರು ಕಾಫಿ ಬೀಜಗಳ ಬೆಳವಣಿಗೆಯ ಚಕ್ರದ ಸ್ವರೂಪದಿಂದಾಗಿ ವರ್ಷದ ಒಂಬತ್ತು ತಿಂಗಳುಗಳ ಕಾಲ ನಿರುದ್ಯೋಗಿಗಳಾಗಿರಬೇಕಾಗುತ್ತಿದೆ. ಈ ಪಾನೀಯದಿಂದ ಕಾಫಿ ಬೆಳೆಗಾರರಿಗೆ ವರ್ಷಪೂರ್ತಿ ಉದ್ಯೋಗ ಲಭಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾಫಿ ಎಲೆಗಳು ನಿರುಪಯುಕ್ತ ವಸ್ತು ಎಂದು ಭಾವಿಸಲಾಗುತ್ತದೆ. ಆದರೆ ಕಾಫಿ ಬೆಳೆಯುವ ದೇಶವೇ ಆಗಿರುವ ಇಂಡೋನೇಷ್ಯಾ ಮತ್ತು ಇಥಿಯೋಪಿಯಾದಲ್ಲಿ ಕಾಫಿ ಎಲೆಯಿಂದ ಪಾನೀಯವನ್ನು ತಯಾರಿಸಿ ಯಶಸ್ವಿಯಾಗಿದೆ. ಅಲ್ಲಿ ಇದನ್ನು ಹಿಂದಿನಿAದಲೇ ಪಾನೀಯ ತಯಾರಿಸುತಿದ್ದು ಇದನ್ನು "ಕುಟಿ ಟೀ" ಮತ್ತು ಪಶ್ಚಿಮ ಸುಮಾತ್ರಾ ಮತ್ತು ಇಂಡೋನೇಷ್ಯಾದಲ್ಲಿ "ಕಹ್ವಾ ಡಾನ್" ಎಂದು ಕರೆಯಲಾಗುತ್ತದೆ. ಆದರೆ, ಈ ಪ್ರದೇಶಗಳಲ್ಲಿನ ಪಾನೀಯ ಕೇಂದ್ರೀಯ ಆಹಾರ ಸಂಶೋಧನಾಲಯ ಅಭಿವೃದ್ಧಿಪಡಿಸಿದ ಪಾನೀಯಕ್ಕಿಂತ ಭಿನ್ನವಾಗಿದೆ. ಪುಷ್ಪಾ ಅವರು ಅಭಿವೃದ್ಧಿಪಡಿಸಿರುವ ಪಾನೀಯವನ್ನು ನೀರಿನಿಂದ ತಯಾರಿಸಬಹುದು, ಕೆಲವು ನಿಮಿಷಗಳ ಕಾಲ ಫಿಲ್ಟರ್ ಮಾಡಿಯೂ ಸೇವಿಸಬಹುದಾಗಿದೆ.

(ಮೊದಲ ಪುಟದಿಂದ)

ಕಡಿಮೆ ಕೆಫಿನ್ ಅಂಶ : ಪುಷ್ಪಾ ಅವರ ಪ್ರಕಾರ ಎಲೆಯ ಸಾರವು ಕಾಫಿಯಂತೆ ರುಚಿಸುವುದಿಲ್ಲ. "ಕಾಫಿ ಅಥವಾ ಚಹಾಕ್ಕೆ ಹೋಲಿಸಿದರೆ ಇದು ಕಡಿಮೆ ‘ಕೆಫಿನ್’ ಅಂಶ ಹೊಂದಿದೆ. ಕಾಫಿ ಎಲೆಗಳಲ್ಲಿ ಫಿನಾಲಿಕ್ ಆಮ್ಲ ಸಮೃದ್ಧವಾಗಿದೆ ಮತ್ತು ಸಂಭಾವ್ಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಒಂದು ಕಾಫಿ ಎಲೆಯು ಹಸಿರು ಚಹಾಕ್ಕಿಂತ ಸುಮಾರು ೧೭ ಪ್ರತಿಶತ ಹೆಚ್ಚು ಉತ್ಕೃಷ್ಟ ನಿರೋಧಕಗಳನ್ನು ಹೊಂದಿರುತ್ತದೆ. ಪಾನೀಯವನ್ನು ಸರಳವಾಗಿ ಸೇವಿಸಬೇಕು. ಪಾನೀಯವು ‘ಕ್ಲೋರೊಜೆನಿಕ್ ಆಮ್ಲ’ ಮತ್ತು ‘ಮ್ಯಾಂಗಿಫೆರಿನ್’ನAತಹ ಆರೋಗ್ಯ-ಉತ್ತೇಜಿಸುವ ‘ಪಾಲಿಫಿನಾಲ್’ಗಳನ್ನು ಹೊಂದಿದ್ದು, ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟ, ಉರಿಯೂತ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ವಿವರಿಸಿದ್ದಾರೆ.

- ಕೋವರ್ ಕೊಲ್ಲಿ ಇಂದ್ರೇಶ್