ಮಡಿಕೇರಿ, ನ. ೧೧: ಕೊಡವ ಜನಾಂಗಕ್ಕೆ ಪ್ರತ್ಯೇಕವಾಗಿ ಕೊಡವ ಜನಾಂಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಆದೇಶ ನೀಡುವಂತೆ ಕೋರಿ ವೀರಾಜಪೇಟೆ ಶಾಸಕ
ಕೆ.ಜಿ. ಬೋಪಯ್ಯ ಅವರು ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದ ವಿವಿಧ ಸಮುದಾಯಗಳಾದ ವೀರಶೈವ, ಲಿಂಗಾಯಿತ, ಒಕ್ಕಲಿಗ ಹಾಗೂ ಮರಾಠಿ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ನಿಗಮಗಳನ್ನು ಸ್ಥಾಪಿಸಲಾ ಗಿರುತ್ತದೆ. ಇದರಂತೆ ಹಿಂದುಳಿದ ವರ್ಗ ಪ್ರವರ್ಗ ೩ಎಯಲ್ಲಿ ಗುರುತಿಸಲಾಗಿರುವ ಕೊಡಗು ಜಿಲ್ಲೆಯ ಕೊಡವ ಜನಾಂಗದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸೌಲಭ್ಯಗಳನ್ನು ಹೊಂದಲು ಒಂದು ನಿಗಮದ ಅವಶ್ಯಕತೆ ಹಾಗೂ ಅನಿವಾರ್ಯತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಬೋಪಯ್ಯ ಅವರು ಈ ಕುರಿತು ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೋ) ಸಂಘಟನೆ ಮಾಡಿರುವ ಮನವಿ ಯನ್ನೂ ಪತ್ರದೊಂದಿಗೆ ಲಗತ್ತಿಸಿದ್ದಾರೆ.
ಸಂಘಟನೆಯ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಶಾಸಕರಿಗೆ ಧನ್ಯವಾದ ಸಲ್ಲಿಸುವದಾಗಿ ಸಂಘಟನೆ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ತಿಳಿಸಿದ್ದಾರೆ.