ಮಡಿಕೇರಿ, ನ. ೧೨: ತಾ ೧೪ ರಿಂದ ೨೦ ರವರೆಗೆ ನಡೆಯಬೇಕಿದ್ದ ೬೮ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಾರಿಯ ಸಹಕಾರ ಸಪ್ತಾಹವನ್ನು ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಚುನಾವಣೆ ಅಧಿಸೂಚನೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಇರುವುದರಿಂದ ಸಹಕಾರ ಸಪ್ತಾಹದ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡುವAತೆ ತೀರ್ಮಾನ ಕೈಗೊಳ್ಳಲಾಯಿತು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೆ.ಪಿ. ಗಣಪತಿ, ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ. ಸಲೀಂ, ಸಹಾಯಕ ನಿಬಂಧಕ ಹೆಚ್.ಡಿ. ರವಿಕುಮಾರ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಉಪಾಧ್ಯಕ್ಷ ಮತ್ತು ನಿರ್ದೇಶಕರುಗಳು ಈ ಸಂದರ್ಭ ಹಾಜರಿದ್ದರು.