ಮಡಿಕೇರಿ, ನ. ೧೧: ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಇಂತಿಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಸಂಬAಧ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವಿದ್ಯುತ್, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ವೈದ್ಯಕೀಯ ಶಿಕ್ಷಣ, ಸಣ್ಣ ನೀರಾವರಿ, ವಸತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಕೈಮಗ್ಗ ಮತ್ತು ಜವುಳಿ, ಕಾರ್ಮಿಕ, ಲೋಕೋಪಯೋಗಿ, ನಗರಾಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ, ಸಾರಿಗೆ, ಕೌಶಲ್ಯಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆರೋಗ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಂದಾಯ, ಆಹಾರ, ಉನ್ನತ ಶಿಕ್ಷಣ ಹೀಗೆ ಹಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ತಮ್ಮ ಇಲಾಖಾ ವ್ಯಾಪ್ತಿಯ ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬAಧಿಸಿದAತೆ ನಿಖರ ಮಾಹಿತಿ ಒದಗಿಸಬೇಕು. ಜೊತೆಗೆ ಆಯಾಯ ತಿಂಗಳು ಡಿಪಿಎಂಎಸ್ ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡುವಂತೆ ಅವರು ಹೇಳಿದರು.
ಕೃಷಿ ಇಲಾಖೆ ಮೂಲಕ ಭಿತ್ತನೆ ಬೀಜ ವಿತರಣೆ, ಮಣ್ಣಿನ ಸತ್ವ ಪರೀಕ್ಷೆ ಹೆಚ್ಚಿಸುವಿಕೆ, ಸೂಕ್ಷö್ಮ ನೀರಾವರಿ, ರಾಷ್ಟಿçÃಯ ಆಹಾರ ಭದ್ರತಾ ಅಭಿಯಾನ, ಕೃಷಿ ಯಾಂತ್ರೀಕರಣ ಉಪ ಅಭಿಯಾನ, ತೋಟಗಾರಿಕೆ ಇಲಾಖೆ ಮೂಲಕ ರಾಷ್ಟಿçÃಯ ಸುಸ್ಥಿರ ಕೃಷಿ ಅಭಿಯಾನ, ರೈತರಿಗೆ ಟಿಲ್ಲರ್ ಯಂತ್ರೋಪಕರಣ, ಸಮಗ್ರ ತೋಟಗಾರಿಕಾ ಅಭಿವೃದ್ಧಿ, ರಾಷ್ಟಿçÃಯ ತೋಟಗಾರಿಕಾ ಮಿಷನ್ ಹೀಗೆ ಹಲವು ಕಾರ್ಯಕ್ರಮ ತಲುಪಿಸುವಂತೆ ಸೂಚಿಸಿದರು. ವಿವಿಧ ಇಲಾಖೆಗಳಲ್ಲಿ ಸಹಾಯಧನ ಕಲ್ಪಿಸುವುದು, ಅನಿಲ ಭಾಗ್ಯ ಯೋಜನೆ, ಪ್ರಧಾನ ಮಂತ್ರಿ ಆವಾಸ್ ವಸತಿ ಯೋಜನೆ ಅನುಷ್ಠಾನ, ಪರಿಶಿಷ್ಟ ಕಾಲೋನಿಗಳಿಗೆ ಉತ್ತಮ ರಸ್ತೆ ಕಲ್ಪಿಸುವುದು, ಮತ್ತಿತರ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮುಜರಾಯಿ ಇಲಾಖೆ ಮೂಲಕ ಹಲವು ಕಾರ್ಯಕ್ರಮ ಅನುಷ್ಠಾನ ಬಗ್ಗೆ ಮಾಹಿತಿ ನೀಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಾಧಿಕಾರಿ ಡಾ. ನಂಜುAಡೇಗೌಡ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ. ಶೇಖ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಸುರೇಶ್ ಭಟ್, ಸೆಸ್ಕ್ ಇಇ ಅಶೋಕ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ, ಸಣ್ಣ ನೀರಾವರಿ ಇಲಾಖೆ ಎಇಇ ಕಾಂತರಾಜು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಲೋಕೋಪಯೋಗಿ ಇಲಾಖೆಯ ಎಇಇ ಶಿವರಾಮ್, ಸ್ಥಾನಿಕ ಇಂಜಿನಿಯರ್ ಹರ್ಷ, ಕೌಶಲ್ಯಾಭಿವೃದ್ಧಿ ಇಲಾಖೆಯ ಉಮಾ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಎಇಇ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ವಿಕಲಚೇತನ ಇಲಾಖೆಯ ಅಧಿಕಾರಿ ವಿಮಲ ಇತರರು ಹಲವು ಮಾಹಿತಿ ನೀಡಿದರು.