ನಾಪೋಕ್ಲು, ನ. ೧೨: ನಾಪೋಕ್ಲು ಗ್ರಾಮ ಪಂಚಾಯಿತಿ ಕಾಂಗ್ರೆಸ್ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಅವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಪ್ರವಾಸಿ ಕೇಂದ್ರದಲ್ಲಿ ನಡೆಸಲಾಯಿತು.

ನಾಪೋಕ್ಲು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬAಧಿಸಿದAತೆ ಚರ್ಚಿಸಲಾಯಿತು.

ಕೆಲ ಕಾರಣಗಳಿಂದ ಪಕ್ಷದಿಂದ ದೂರವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯ ಕಾಳೆಯಂಡ ಸಾಬಾ ತಿಮ್ಮಯ್ಯ ಅವರ ಅಸಾಮಾಧಾನವನ್ನು ಶಮನಗೊಳಿಸಿ ಪಕ್ಷದಲ್ಲಿಯೇ ಮುಂದುವರೆಯುವAತೆ ಹಾಗೂ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಲಾಯಿತು. ಸಭೆಯಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎಸ್. ಪಾರ್ವತಿ, ಉಪಾಧ್ಯಕ್ಷ ಮಹಮ್ಮದ್ ಖುರೇಶಿ, ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಹಾಜರಿದ್ದರು.